ಚಿಕ್ಕಮಗಳೂರು : ಚಿಕ್ಕಮಂಗಳೂರಿನಲ್ಲಿ ಮಂಗನ ಕಾಯಿಲೆ ಸೋಂಕು ಹೆಚ್ಚುತ್ತಿದ್ದು ಇದೀಗ ಮತ್ತಿಬ್ಬರಿಗೆ ಮಂಗನ ಕಾಯಿಲೆ ರೋಗ ದೃಢವಾಗಿದ್ದು, ಇದುವರೆಗೂ ಒಟ್ಟು 6 ಜನರಿಗೆ ಮಂಗನ ಕಾಯಿಲೆ ದೃಢಪಟ್ಟಿದೆ. ಜಿಲ್ಲೆಯ ಎನ್ಆರ್ ಪುರ ತಾಲೂಕಿನ ಮೂವರಲ್ಲಿ, ಕೊಪ್ಪ ತಾಲೂಕಿನ ಇಬ್ಬರಲ್ಲಿ ಮತ್ತು ಚಿಕ್ಕಮಗಳೂರು ತಾಲೂಕಿನ ಓರ್ವನಲ್ಲಿ ಮಂಗನಕಾಯಿಲೆ ರೋಗ ಕಾಣಿಸಿಕೊಂಡಿದೆ.
ಮಂಗನಕಾಯಿಲೆ ಚಿಕಿತ್ಸೆಗೆಂದು ಕೊಪ್ಪ ಸರ್ಕಾರಿ ಆಸ್ಪತ್ರೆಯಲ್ಲಿ ಆರೋಗ್ಯ ಇಲಾಖೆ ಕೆಎಫ್ಡಿ ವಾರ್ಡ್ ತೆರೆದಿದೆ. ಆರೋಗ್ಯ ಇಲಾಖೆಯಿಂದ ಅಲರ್ಟ್ ಘೋಷಣೆ ಮಾಡಲಾಗಿದೆ. ಇನ್ನು, ಗ್ರಾಮಗಳಿಗೆ ಆರೋಗ್ಯ ಇಲಾಖೆ ಸಿಬ್ಬಂದಿ ಭೇಟಿ, ಪರಿಶೀಲನೆ ನಡೆಸುತ್ತಿದ್ದಾರೆ. ಅರಣ್ಯ ಪ್ರದೇಶಕ್ಕೆ ತೆರಳದಂತೆ ಗ್ರಾಮಸ್ಥರಿಗೆ ಅಧಿಕಾರಿಗಳು ಸೂಚನೆ ನೀಡುತ್ತಿದ್ದಾರೆ.
ಕಳೆದ ವರ್ಷ ಚಿಕ್ಕಮಗಳೂರು ಜಿಲ್ಲೆಯಲ್ಲಿ 132 ಜನರಲ್ಲಿ ಕಾಯಿಲೆ ಕಾಣಿಸಿಕೊಂಡು ನಾಲ್ವರನ್ನು ಬಲಿ ಪಡೆದಿತ್ತು. ಕಾಡಂಚಿನ ತಾಲೂಕುಗಳಾದ ಚಿಕ್ಕಮಗಳೂರು, ಕೊಪ್ಪ, ಎನ್ಆರ್ಪುರ, ಶೃಂಗೇರಿ ತಾಲೂಕುಗಳಲ್ಲಿ ಮಂಗನ ಕಾಯಿಲೆ ತನ್ನ ರುದ್ರರೂಪ ತಾಳುವ ಮುನ್ನ ಅರೋಗ್ಯ ಇಲಾಖೆ ಮಂಗನ ಕಾಯಿಲೆ ಅಲರ್ಟ್ ಘೋಷಣೆ ಮಾಡಲಾಗಿದೆ.