ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ಇಬ್ಬರು ನಟೋರಿಯಸ್ ಕಳ್ಳರನ್ನು ಪೊಲೀಸರು ಬಂಧಿಸಿದ್ದಾರೆ.
ನೆಲಮಂಗಲ ಟೌನ್ ಪೊಲೀಸರು ಇಬ್ಬರು ನಟೋರಿಯಸ್ ಕಳ್ಳರನ್ನು ಬಂಧಿಸಿದ್ದಾರೆ. ಜಯಂತ್ ಅಲಿಯಾಸ್ ಬ್ಯಾಟರಿ ಜಯಂತ್, ಯತೀಶ್ ಬಂಧಿತರು. ನೆಲಮಂಗಲದ ಇಂಜಿನಿಯರ್ ಮನೆಯೊಂದರಲ್ಲಿ ಕಳ್ಳತನ ಮಾಡಿದ್ದರು. ಬರೋಬ್ಬರಿ 56 ಲಕ್ಷ ಬೆಲೆ ಬಾಳುವ ಚಿನ್ನಾಭರಣ ದೋಚಿದ್ದರು. ಅರ್ಧ ಕೆಜಿಗೂ ಹೆಚ್ಚು ಚಿನ್ನ ದೋಚಿ ಪರಾರಿಯಾಗಿದ್ದರು.
ಇದೀಗ ಇಬ್ಬರನ್ನು ಪೊಲೀಸರು ಬಂಧಿಸಿದ್ದರು. ಬಂಧಿತರಿಂದ 343 ಗ್ರಾಂ. ಚಿನ್ನಾಭರಣ ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಗಳು 25-26 ಪ್ರಕರಣಗಳಲ್ಲಿ ಭಾಗಿಯಾಗಿರುವುದು ಪತ್ತೆಯಾಗಿದೆ.