ಕಲಬುರ್ಗಿ : ಮೋಟೇಶನ್ ಮತ್ತು ಪಾಣಿ ಹೆಸರು ಸೇರ್ಪಡೆ ಮಾಡುವುದಕ್ಕೆ ವ್ಯಕ್ತಿಯೊಬ್ಬರ ಬಳಿ 30,000 ಲಂಚ ಸ್ವೀಕರಿಸುವ ವೇಳೆ ಇಬ್ಬರು ಕಂದಾಯ ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಕಲಬುರ್ಗಿ ತಾಲೂಕಿನ ಮೇಳಕುಂದ ಗ್ರಾಮದಲ್ಲಿ ನಡೆದಿದೆ.
ಮೇಳಕುಂದಾ ಗ್ರಾಮದ ಗ್ರಾಮಾಧಿಕಾರಿ ಡಾ.ಕಾಂತೇಶ್ ಮತ್ತು ಅಖಾತರ್ ಪಟೇಲ್ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದ ಕಂದಾಯ ಅಧಿಕಾರಿಗಳು ಎಂದು ತಿಳಿದುಬಂದಿದೆ. ಮೋಟೇಶನ್ ಮತ್ತು ಪಾಣಿ ಹೆಸರು ಸೇರ್ಪಡೆ ಮಾಡುವುದಕ್ಕೆ ಸಿದ್ದರಾಮಯ್ಯ ಎಂಬುವವರಿಗೆ 30 ಸಾವಿರ ರೂಪಾಯಿಗೆ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.
ಈ ವೇಳೆ 20 ಸಾವಿರ ಮುಂಗಡ ಹಣ ಪಡೆಯುವಾಗ ಖಚಿತ ಮಾಹಿತಿ ಪಡೆದ ಪೊಲೀಸರು, ಅಧಿಕಾರಿಗಳನ್ನು ರೆಡ್ ಹ್ಯಾಂಡ್ ಆಗಿ ಬಲೆಗೆ ಬಿದ್ದಿದ್ದಾರೆ.ಕಲಬುರಗಿ ಲೋಕಾಯುಕ್ತ ಎಸ್.ಪಿ ಬಿಕೆ.ಉಮೇಶ್ ಅವರ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆ ನಡೆದಿದೆ. ಇಬ್ಬರು ಕಂದಾಯ ಅಧಿಕಾರಿಗಳನ್ನು ವಶಕ್ಕೆ ಪಡೆದ ಲೋಕಾಯುಕ್ತ ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ತಿಳಿದುಬಂದಿದೆ.