ಹಾಸನ : ಹಾಸನದಲ್ಲಿ ಭೀಕರವಾದ ಸಂಭವಿಸಿದ್ದು ರಸ್ತೆ ಬದಿಯಲ್ಲಿರುವ ವಿದ್ಯುತ್ ಕಂಬಕ್ಕೆ ಬೈಕ್ ಒಂದು ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ನಲ್ಲಿ ಇದ್ದಂತಹ ಇಬ್ಬರು ಸವಾರರು ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಮೃತರನ್ನು ಲೋಕೇಶ್ (25) ಹಾಗೂ ಕಿರಣ್ (32) ಎಂದು ತಿಳಿದುಬಂದಿದೆ.
ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹೊನ್ನೇನಹಳ್ಳಿ ಬಳಿ ಈ ಒಂದು ಭೀಕರ ಅಪಘಾತ ಸಂಭವಿಸಿದ್ದು ಬೈಕ್ ನಲ್ಲಿ ಇಬ್ಬರು ಸವಾರರು ತೆರುಳುತ್ತಿದ್ದರು. ಆಗ ಬೈಕ್ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ ಪರಿಣಾಮ ಸ್ಥಳದಲ್ಲೇ ಲೋಕೇಶ್ ಹಾಗು ಕಿರಣ್ ಸಾವನ್ನಪ್ಪಿದ್ದು ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಅಪಘಾತದ ಕುರಿತು ಬೇಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








