ಬೆಂಗಳೂರು : ಬೆಂಗಳೂರಿನಲ್ಲಿ ಇಬ್ಬರು ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಮೇಲೆ ಮನಸೋಇಚ್ಛೆ ಹಲ್ಲೆ ಮಾಡಿರುವ ಘಟನೆ ನಡೆದಿದ್ದು, ಐದು ಜನರ ವಿರುದ್ಧ ಪ್ರಕರಣ ದಾಖಲಾಗಿದೆ.
ಬೆಂಗಳುರಿನ ಚಂದ್ರಾಲೇಔಟ್ ನಲ್ಲಿ ಮಾರ್ಚ್ 17 ರ ರಾತ್ರಿ ಇಬ್ಬರು ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಲಾಗಿದೆ. ಬಿಟ್ಟು ಬಿಡಿ ಎಂದರೂ ಬಿಡದೇ ಮನಸೋಇಚ್ಛೆ ಹಲ್ಲೆ ಮಾಡಲಾಗಿದೆ. ಕಟ್ಟಿಗೆಗಳಿಂದ ಇಬ್ಬರು ಬಾಲಕರ ಮೇಲೆ ಹಲ್ಲೆ ಮಾಡಲಾಗಿದೆ. ಹಲ್ಲೆಯಿಂದಾಗಿ ಬಾಲಕರ ಕೈ, ಕುತ್ತಿಗೆ ಭಾಗದಲ್ಲಿ ಗಾಯವಾಗಿದೆ.
ಸದ್ಯ ಗಾಯಾಳು ಬಾಲಕರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಕಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಚಂದ್ರಾಲೇಔಟ್ ಠಾಣೆಯಲ್ಲಿ ಐವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.