ಗದಗ : ರಸ್ತೆ ಬದಿಯ ಡಿವೈಡರ್ ಗೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಗದಗ ತಾಲೂಕಿನ ಹುಲಕೋಟಿಯಲ್ಲಿ ನಡೆದಿದೆ.
ಹೌದು ಡಿವೈಡೆರ್ ಗೆ ಕಾರು ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ. ಗದಗ ತಾಲೂಕಿನ ಹುಲಕೋಟೆ ಗ್ರಾಮದ ಬಳಿ ಈ ಒಂದು ಘಟನೆ ನಡೆದಿದೆ. ಮೊಹಮ್ಮದ್ ಜಾಯಿದ್ ಹಾಗೂ ಸಂಜೀವ್ ಗಡ್ಡಿ ಮೃತ ದುರ್ದೈವಿಗಳು ಎಂದು ತಿಳಿದು ಬಂದಿದೆ.
ಇನ್ನು ಅಪಘಾತದಲ್ಲಿ ಗಾಯಗೊಂಡಂತಹ ಆಶಿಶ್ ಗೂಡೂರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹುಲಕೋಟೆಯಿಂದ ಗದಗಕ್ಕೆ ಬರುತ್ತಿದ್ದಾಗ ಈ ಒಂದು ಅಪಘಾತ ಸಂಭವಿಸಿದೆ. ಘಟನೆ ಕುರಿತಂತು ಹುಲಕೋಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಕೈ ಕೊಟ್ಟಿದ್ದಾರೆ.