ಚಿತ್ರದುರ್ಗ : ಬೆಂಗಳೂರಿನಿಂದ ಹೊಸಪೇಟೆಗೆ ತೆರಳುತ್ತಿದ್ದ ವೇಳೆ ಟ್ಯಾಂಕರ್ ಲಾರಿ ಒಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಸ್ಥಳದಲ್ಲೇ ಇಬ್ಬರು ಮಹಿಳೆಯರು ಮೃತಪಟ್ಟಿರುವ ಘಟನೆ ಚಿತ್ರದುರ್ಗದಲ್ಲಿ ಮದಕರಿಪುರ ಗ್ರಾಮದಲ್ಲಿ ನಡೆದಿದೆ.
ಅಪಘಾತದಲ್ಲಿ ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದು, ಬೆಂಗಳೂರು ಮೂಲದ ನಿರ್ಮಲ (55) ಹಾಗೂ ವಿನುತ (40)ಮಹಿಳೆ ಎಂದು ಹೇಳಲಾಗುತ್ತಿದೆ. ಅಲ್ಲದೆ ಫಣಿರಾಜ್, ರಶ್ಮಿ, ಹಾಗೂ ಯಶಸ್ ಎನ್ನುವರಿಗೆ ಗಂಭಿರವಾಗಿ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಬೆಂಗಳೂರಿನಿಂದ ಕಾರಲ್ಲಿ ಹೊಸಪೇಟೆಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದ್ದು, ಸ್ಥಳಕ್ಕೆ ಚಿತ್ರದುರ್ಗ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಚಿತ್ರದುರ್ಗ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.