ಹಾಸನ : ಹಾಸನ ಜಿಲ್ಲೆಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಸಿಡಿಲು ಬಡಿದು ಇಬ್ಬರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಹಾಸನ ಜಿಲ್ಲೆಯ ಅರಕಲಗೂಡಿನ ದೊಡ್ಡಮಗ್ಗೆ ಗ್ರಾಮದಲ್ಲಿ ಹೊಲದಲ್ಲಿ ಜೋಳ ಬಿತ್ತನೆ ಮಾಡುತ್ತಿದ್ದ ವೇಳೆ ಮಳೆ ಶುರುವಾಗಿದದೆ. ಈ ವೇಳೆ ಮರದ ಕೆಳಗೆ ನಿಂತಿದ್ದಾಗ ಸಿಡಿಲು ಬಡಿದು ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದಾರೆ. ಮೃತರನ್ನು ಮುತ್ತಮ್ಮ (70), ಪುಟ್ಟಮ್ಮ (60) ಎಂದು ಗುರುತಿಸಲಾಗಿದೆ.
ಇನ್ನು ಘಟನೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಅಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.