ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿಜಯಪುರ ಬೈಪಾಸ್ ಬಳಿ ವ್ಹೀಲಿಂಗ್ ಕ್ರೇಜ್ ಗೆ ಇಬ್ಬರು ಯುವಕರು ಬಲಿಯಾಗಿರುವ ಘಟನೆ ನಡೆದಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿಜಯಪುರದಲ್ಲಿ ಬೈಕ್ ವ್ಹೀಲಿಂಗ್ ಮಾಡುವಾಗ ಟ್ಯಾಂಕರ್ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ.ಮೃತ ಯುವಕರನ್ನು ಅರ್ಫಾಜ್ (22) ಮನೋಜ್ (22) ಎಂದು ಗುರುತಿಸಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರ ಬೈಪಾಸ್ ನಲ್ಲಿ ಅರ್ಫಾಜ್ ಮತ್ತು ಮನೋಜ್ ವ್ಹೀಲಿಂಗ್ ಮಾಡುತ್ತಿದ್ದಾಗ ಕ್ಯಾಂಟರ್ ಗೆ ಬೈಕ್ ಡಿಕ್ಕಿ ಹೊಡೆ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.








