ಯಾದಗಿರಿ : ಯಾದಗಿರಿಯಲ್ಲಿ ತಡರಾತ್ರಿ ಕಾರು ಹಾಗೂ ಬೈಕ್ ನಡುವೆ ಭೀಕರವಾದ ಅಪಘಾತ ಸಂಭವಿಸಿ ಸ್ಥಳದಲ್ಲೇ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ, ಯಾದಗಿರಿ ಜಿಲ್ಲೆಯ ಶಹಪುರ ತಾಲೂಕಿನಲ್ಲಿ ನಡೆದಿದೆ.
ಮೃತ ಯುವಕರು ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ಚಾಮನಾಳ ಗ್ರಾಮದ ನಿವಾಸಿಗಳು ಎಂದು ತಿಳಿದು ಬಂದಿದೆ. ಯುವಕರು ಶಹಪುರದಿಂದ ಚಾಮನಾಳಕ್ಕೆ ಹೋಗುತ್ತಿದ್ದಾಗ ಕಾರು ಮತ್ತು ಬೈಕ್ ಮುಖಾಂತರ ಡಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ. ಘಟನೆ ಕುರಿತು ಶಹಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.