ಉಡುಪಿ : ಶುಭ ಕಾರ್ಯದ ನಿಮಿತ್ತ ಉಡುಪಿಗೆ ಬಂದಿದ್ದ ಬೆಂಗಳೂರಿನ ಇಬ್ಬರು ಯುವಕರು ಸಮುದ್ರದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಬೀಜಾಡಿಯಲ್ಲಿ ರೆಸಾರ್ಟ್ ನಲ್ಲಿ ತಂಗಿದ್ದ ಬೆಂಗಳೂರಿನ ನಾಲ್ವರು ಯುವಕರು ಇಂದು ಸಮುದ್ರಕ್ಕಿಳಿದಿದ್ದಾರೆ. ಈ ವೇಳೆ ನಾಲ್ವರು ಯುವಕರ ಪೈಕಿ ಇಬ್ಬರು ಸಮುದ್ರದಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ಸದ್ಯ ಸಮುದ್ರದಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಓರ್ವ ಯುವಕನ ಶವ ಪತ್ತೆಯಾಗಿದ್ದು, ಮತ್ತೊಬ್ಬನಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.