ಮಂಡ್ಯ : ಮಂಡ್ಯ ಜಿಲ್ಲೆಯಲ್ಲಿ ನಡೆದ ಗಣೇಶ ವಿಸರ್ಜನೆ ವೇಳೆ ಮತ್ತೆ ಗಲಾಟೆಯಾಗಿದ್ದು, ಇಬ್ಬರು ಯುವಕರಿಗೆ ಚಾಕು ಇರಿದಿರುವ ಘಟನೆ ಮಂಡ್ಯ ತಾಲೂಕಿನ ಮಾಚಹಳ್ಳಿಯಲ್ಲಿ ನಡೆದಿದೆ.
ಮಾಚಹಳ್ಳಿಯಲ್ಲಿ ಣೇಶ ವಿಸರ್ಜನೆ ವೇಳೆ ಡ್ಯಾನ್ಸ್ ಮಾಡುತ್ತಿದ್ದ ಸಚಿನ್, ನಂಜುಂಡಸ್ವಾಮಿ ಮೇಲೆ ಹಲ್ಲೆ ನಡೆಸಿ ಹೊಟ್ಟೆಗೆ ಚಾಕು ಇರಿಯಲಾಗಿದೆ. ದರ್ಶನ್, ಲೋಕೇಶ ಹಾಗೂ ಸ್ನೇಹಿತರು ಗಲಾಟೆ ಮಾಡಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದ್ದು, ದರ್ಶನ್ ಮತ್ತು ಸಚಿನ್ ನಡುವೆ ಆಗಾಗ ಜಗಳ ನಡೆಯುತ್ತಿತ್ತು ಎನ್ನಲಾಗಿದೆ. ಸದ್ಯ ಗಾಯಗೊಂಡ ಸಚಿನ್ ಹಾಗೂ ನಂಜುಂಡಸ್ವಾಮಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಹಳೇ ದ್ವೇಷದ ಹಿನ್ನೆಲೆ ದರ್ಶನ್ ಮತ್ತು ಆತನ ಸಹಚರರು ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದ್ದು, ಘಟನೆ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಶಿವಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.