ಮೈಸೂರು : ಮೈಸೂರಿನ ಉದಯಗಿರಿ ಠಾಣೆಯ ಮೇಲೆ ಕಲ್ಲುತೂರಾಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಧಿತರ ಸಂಖ್ಯೆ 13ಕ್ಕೆ ಏರಿಕೆಯಾಗಿದ್ದು, ಪೊಲೀಸರು, 12 ಜನ ಆರೋಪಿಗಳು ಹಾಗೂ ಓರ್ವ ಬಾಲಕನನ್ನು ಅರೆಸ್ಟ್ ಮಾಡಿದ್ದರು. ಆರೋಪಿಗಳನ್ನು ಜಡ್ಜ್ ಮುಂದೆ ಹಾಜರುಪಡಿಸಲಾಗಿದ್ದು, ವಿಚಾರಣೆ ನಡೆಸಿದ ನ್ಯಾಯಾಧೀಶರು ಆರೋಪಿಗಳಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಆದೇಶ ನೀಡಿದರು.
12 ಮಂದಿ ಯುವಕರು ಓರ್ವ ಬಾಲಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಇನ್ನು ಉಳಿದ ಆರೋಪಿಗಳಿಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿದಿದ್ದಾರೆ 13 ಜನರಿಗೆ ಮೈಸೂರಿನ ಕೆಆರ್ ಪುತ್ರಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಬಳಿಕ ಆರೋಪಿಗಳನ್ನು ಪೊಲೀಸರು ಜಡ್ಜ್ ಮುಂದೆ ಹಾಜರುಪಡಿಸಿದ್ದರು. ಈ ವೇಳೆ ನ್ಯಾಯಾಧೀಶರು 12 ಆರೋಪಿಗಳಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಆದೇಶ ನೀಡಿದ್ದು ಓರ್ವ ಬಾಲಕನನ್ನು ಪೊಲೀಸರು ಬಾಲ ಮಂದಿರಕ್ಕೆ ಕಳುಹಿಸಿದ್ದಾರೆ. ಇನ್ನು ಉಳಿದ ಆರೋಪಿಗಳಿಗೆ ಶೋಧ ಕಾರ್ಯ ಮುಂದುವರೆದಿದೆ.