ಉಡುಪಿ : ಸಾಲ ನೀಡಿದ್ದ ಬ್ಯಾಂಕ್ ಅಧಿಕಾರಿಗಳು ಮನೆಗೆ ಬಂದು ಸಾಲ ವಾಪಸ್ ನೀಡುವಂತೆ ಕಿರುಕುಳ ನೀಡುತ್ತಿದ್ದರು. ಇದರಿಂದ ಮನನೊಂದ ಯುವಕನೊಬ್ಬ ಮನೆಯಲ್ಲಿ ಫ್ಯಾನ್ ಗೆ ನೇಣು ತೆಗೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿ ಜಿಲ್ಲೆಯ ಪಡುಬಿದ್ರೆಯಲ್ಲಿ ನಡೆದಿದೆ.
ಮೃತ ಯುವಕನನ್ನು ನಸ್ರುಲ್ಲಾ(29) ಎಂದು ತಿಳಿದುಬಂದಿದ್ದು, ಈತ ವಿದೇಶದಲ್ಲಿ ಉದ್ಯೋಗದಲ್ಲಿ ತೊಡಗಿಕೊಂಡಿದ್ದ. ಕಳೆದ ಮೂರು ತಿಂಗಳ ಹಿಂದೆ ಅವರು ಊರಿಗೆ ವಾಪಸ್ ಆಗಿದ್ದರು ಈ ವೇಳೆ, ಸಾಲ ನೀಡಿದ ಬ್ಯಾಂಕ್ ಅಧಿಕಾರಿಗಳು ಮನೆಗೆ ಭೇಟಿ ನೀಡುತ್ತಿದ್ದರು.
ಇದರಿಂದ ಮಾನಸಿಕವಾಗಿ ನೊಂದಿದ್ದ ನಸ್ರುಲ್ಲಾ ನಿನ್ನೆ ಮನೆಯ ಬೆಡ್ ರೂಂನಲ್ಲಿ ಫ್ಯಾನಿಗೆ ವೇಲ್ ನಿಂದ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ಕುರಿತು ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.