ನವದೆಹಲಿ: ಪೊಂಗಲ್ ಮತ್ತು ಮಕರ ಸಂಕ್ರಾಂತಿ ಹಬ್ಬಗಳ ಕಾರಣ ಬುಧವಾರ (ಜನವರಿ 15, 2025)ದ ನಾಳೆ ನಿಗದಿಯಾಗಿದ್ದ ಯುಜಿಸಿ-ನೆಟ್ ಪರೀಕ್ಷೆಯನ್ನು ( UGC-NET examination ) ಮುಂದೂಡಲಾಗಿದೆ ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (National Testing Agency – NTA) ಪ್ರಕಟಿಸಿದೆ. ಪರೀಕ್ಷೆಯ ಹೊಸ ದಿನಾಂಕವನ್ನು ನಂತರ ಪ್ರಕಟಿಸಲಾಗುವುದು ಎಂದು ಎನ್ಟಿಎ ತಿಳಿಸಿದೆ.
2025 ರ ಜನವರಿ 15 ರಂದು ಪೊಂಗಲ್, ಮಕರ ಸಂಕ್ರಾಂತಿ ಮತ್ತು ಇತರ ಹಬ್ಬದ ಕಾರಣದಿಂದಾಗಿ ಯುಜಿಸಿ – ನೆಟ್ ಡಿಸೆಂಬರ್ 2024 ಪರೀಕ್ಷೆಯನ್ನು ಮುಂದೂಡಲು ರಾಷ್ಟ್ರೀಯ ಪರೀಕ್ಷಾ ಸಂಸ್ಥೆಗೆ ಮನವಿ ಬಂದಿದೆ ಎಂದು ಎನ್ಟಿಎ ಹೇಳಿಕೆಯಲ್ಲಿ ತಿಳಿಸಿದೆ. “ಆಕಾಂಕ್ಷಿಗಳ ಹಿತದೃಷ್ಟಿಯಿಂದ, ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ಟಿಎ) 2025 ರ ಜನವರಿ 15 ರಂದು ನಿಗದಿಯಾಗಿದ್ದ ಯುಜಿಸಿ-ನೆಟ್ ಡಿಸೆಂಬರ್ 2024 ಪರೀಕ್ಷೆಯನ್ನು ಮುಂದೂಡಲು ನಿರ್ಧರಿಸಿದೆ. ಪರೀಕ್ಷೆಯ ಹೊಸ ದಿನಾಂಕವನ್ನು ನಂತರ ಪ್ರಕಟಿಸಲಾಗುವುದು” ಎಂದು ಅದು ಹೇಳಿದೆ.