ನವದೆಹಲಿ:ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಭೂಗತ ಪಾತಕಿ ಛೋಟಾ ರಾಜನ್ ನನ್ನು ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. 2015ರಲ್ಲಿ ಇಂಡೋನೇಷ್ಯಾದಿಂದ ಗಡಿಪಾರಾದ ರಾಜನ್, ಸಂಘಟಿತ ಅಪರಾಧಕ್ಕೆ ಸಂಬಂಧಿಸಿದ ಏಳು ಪ್ರಕರಣಗಳಲ್ಲಿ ಶಿಕ್ಷೆಗೆ ಗುರಿಯಾಗಿದ್ದಾನೆ.
ದೆಹಲಿಯ ತಿಹಾರ್ ಜೈಲಿನಲ್ಲಿದ್ದ ಭೂಗತ ಪಾತಕಿ ಛೋಟಾ ರಾಜನ್ ಅವರನ್ನು ಚಿಕಿತ್ಸೆಗಾಗಿ ಏಮ್ಸ್ ಗೆ ದಾಖಲಿಸಲಾಗಿದೆ. ಭೂಗತ ಪಾತಕಿ ಛೋಟಾ ರಾಜನ್ ದಾಖಲಾಗಿರುವ ಏಮ್ಸ್ ವಾರ್ಡ್ ನಲ್ಲಿ ದೆಹಲಿ ಪೊಲೀಸರು ಬಿಗಿ ಭದ್ರತೆ ಒದಗಿಸಿದ್ದಾರೆ. ಅವನ ಸ್ಥಿತಿ ಏನು ಎಂಬುದು ಸದ್ಯಕ್ಕೆ ಸ್ಪಷ್ಟವಾಗಿಲ್ಲ.
2001ರಲ್ಲಿ ನಡೆದ ಜಯಾ ಶೆಟ್ಟಿ ಕೊಲೆ ಪ್ರಕರಣದಲ್ಲಿ ಭೂಗತ ಪಾತಕಿ ಛೋಟಾ ರಾಜನ್ ಗೆ ಮುಂಬೈನ ವಿಶೇಷ ನ್ಯಾಯಾಲಯ 2024ರ ಮೇ ತಿಂಗಳಲ್ಲಿ ಜೀವಾವಧಿ ಶಿಕ್ಷೆ ವಿಧಿಸಿತ್ತು. ಪತ್ರಕರ್ತ ಜೆ ಡೇ ಹತ್ಯೆ ಪ್ರಕರಣದಲ್ಲಿ ರಾಜನ್ ಗೆ ಇದೇ ರೀತಿಯ ಶಿಕ್ಷೆ ವಿಧಿಸಿದ ಆರು ವರ್ಷಗಳ ನಂತರ ಈ ಶಿಕ್ಷೆ ವಿಧಿಸಲಾಗಿದೆ.
ಮಹಾರಾಷ್ಟ್ರ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ (ಎಂಸಿಒಸಿಎ) ಅಡಿಯಲ್ಲಿ ಪ್ರಕರಣಗಳ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಧೀಶ ಎ.ಎಂ.ಪಾಟೀಲ್, ರಾಜನ್ ಅವರನ್ನು ಕೊಲೆ (ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302), ಕ್ರಿಮಿನಲ್ ಪಿತೂರಿ (ಸೆಕ್ಷನ್ 120 ಬಿ) ಮತ್ತು ಎಂಸಿಒಸಿಎ ಉಲ್ಲಂಘನೆ ಪ್ರಕರಣಗಳಲ್ಲಿ ತಪ್ಪಿತಸ್ಥರೆಂದು ಘೋಷಿಸಿದರು