ಬೆಂಗಳೂರು : ಬೆಂಗಳೂರಿನಲ್ಲಿ ನಿರ್ಜನ ಪ್ರದೇಶದಲ್ಲಿ ಅರೆಸುಟ್ಟ ಸ್ಥಿತಿಯಲ್ಲಿ ಅಪರಿಚಿತನ ಶವ ಪತ್ತೆಯಾಗಿದೆ. ಬೆಂಗಳೂರಿನ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಗಂಗೊಂಡನಹಳ್ಳಿಯಲ್ಲಿ ಅಪರಿಚಿತನ ಶವ ಅರೆಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಸುಮಾರು 30 ವರ್ಷದ ವ್ಯಕ್ತಿಯ ಮೃತದೇಹ ಇರಬಹುದು ಎಂದು ಮಾಹಿತಿ ತಿಳಿದು ಬಂದಿದೆ. ಬೇರೆ ಕಡೆ ಕೊಂದು ಇಲ್ಲಿ ತಂದು ಮೃತದೇಹ ಬಿಸಾಡಿರಬಹುದು. ಶವಕ್ಕೆ ಹಗ್ಗದಿಂದ ಕಟ್ಟಿರುವ ಗುರುತು ಪತ್ತೆಯಾಗಿದ್ದು ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಎಸ್.ಪಿ ಸಿ.ಕೆ ಬಾಬಾ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಸದ್ಯ ಅರೆಸುಟ್ಟ ಸ್ಥಿತಿಯಲ್ಲಿ ಶವ ಪತ್ತೆಯಾದ ಸ್ಥಳದಲ್ಲಿ ಪೊಲೀಸರು ತಪಾಸಣೆ ನಡೆಸುತ್ತಿದ್ದಾರೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ಶವ ಶಿಫ್ಟ್ ಮಾಡಲಾಗಿದೆ.








