ನವದೆಹಲಿ : ಪಿಎಂ ಸೂರ್ಯ ಘರ್ ಉಚಿತ ವಿದ್ಯುತ್ ಯೋಜನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದ್ದು, ಇದರಿಂದ 1 ಕೋಟಿ ಕುಟುಂಬಗಳಿಗೆ ಪ್ರಯೋಜನ ದೊರೆಯಲಿದೆ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ಮಾಹಿತಿ ನೀಡಿದ್ದಾರೆ.
ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ಇಂದು ಕ್ಯಾಬಿನೆಟ್ ಸಭೆ ನಡೆದಿದ್ದು, ಕೆಲವು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಂಡಿದೆ. ಸಭೆಯ ನಂತ್ರ ಮಾಹಿತಿ ನೀಡಿದ ಸಚಿವ ಅನುರಾಗ್ ಠಾಕೂರ್, “ಪಿಎಂ ಸೂರ್ಯ ಘರ್ ಉಚಿತ ವಿದ್ಯುತ್ ಯೋಜನೆಗೆ ಅನುಮೋದನೆ ನೀಡಲಾಗಿದೆ. ಈ ಯೋಜನೆಯಡಿ 1 ಕೋಟಿ ಕುಟುಂಬಗಳಿಗೆ 300 ಯೂನಿಟ್ ವಿದ್ಯುತ್ ಉಚಿತವಾಗಿ ಸಿಗಲಿದೆ. ಈ ಯೋಜನೆಯಿಂದ ಸುಮಾರು 5-6 ಕೋಟಿ ಜನರು ಪ್ರಯೋಜನ ಪಡೆಯಲಿದ್ದಾರೆ” ಎಂದು ಹೇಳಿದರು.
ವಿಧಾನಸಭೆಯಲ್ಲಿ ‘ಜೈ ಸೀತಾರಾಮ್’ ಎಂದು ಘೋಷಣೆ ಕೂಗಿದ ಸಿದ್ದರಾಮಯ್ಯ: ಬಿಜೆಪಿಗೆ ಠಕ್ಕರ್
BREAKING : ‘ಪಿಎಂ ಸೂರ್ಯ ಘರ್ ಯೋಜನೆ’ಗೆ ಕ್ಯಾಬಿನೆಟ್ ಅನುಮೋದನೆ, 1 ಕೋಟಿ ಮನೆಗಳಿಗೆ ‘300 ಯುನಿಟ್ ಉಚಿತ ವಿದ್ಯುತ್’