ಗುಜರಾತ್: ಏರ್ ಇಂಡಿಯಾ ವಿಮಾನ ಘೋರ ಅಪಘಾತಕ್ಕೀಡಾಗಿ ವಿಮಾನದಲ್ಲಿದ್ದ ಗುಜರಾತ್’ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಸೇರಿ ಎಲ್ಲಾ 242 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಸಧ್ಯ ದುರಂತ ನಡೆದ ಸ್ಥಳಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ನೀಡಿದ್ದಾರೆ.
ಅಹಮದಾಬಾದ್ ವಿಮಾನ ಅಪಘಾತದ ಸ್ಥಳಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸಿದ್ದಾರೆ. ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್, ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಕಿಂಜರಪು, ನಾಗರಿಕ ವಿಮಾನಯಾನ ಖಾತೆ ರಾಜ್ಯ ಸಚಿವ ಮುರಳೀಧರ್ ಮೊಹೋಲ್ ಮತ್ತು ಗುಜರಾತ್ ಗೃಹ ಸಚಿವ ಹರ್ಷ ಸಾಂಘವಿ ಕೂಡ ಅವರೊಂದಿಗೆ ಇದ್ದಾರೆ.
232 ಪ್ರಯಾಣಿಕರು ಮತ್ತು 10 ಸಿಬ್ಬಂದಿಯನ್ನು ಹೊತ್ತ ಏರ್ ಇಂಡಿಯಾ ವಿಮಾನ ಮಧ್ಯಾಹ್ನ 1.17 ಕ್ಕೆ ಲಂಡನ್’ಗೆ ಹೊರಟಾಗ ಈ ದುರಂತ ಸಂಭವಿಸಿದೆ.
ವಿಮಾನದಲ್ಲಿ 169 ಭಾರತೀಯರು, 53 ಬ್ರಿಟಿಷ್ ಪ್ರಜೆಗಳು, 7 ಪೋರ್ಚುಗೀಸರು ಮತ್ತು ಒಬ್ಬ ಕೆನಡಾದ ಪ್ರಯಾಣಿಕ ಇದ್ದರು. ಅಹಮದಾಬಾದ್ನ ಮೇಘನಿನಗರ ಪ್ರದೇಶದ ಬಳಿಯ ಧಾರ್ಪುರದಿಂದ ದಟ್ಟ ಹೊಗೆ ಕಾಣಿಸಿಕೊಂಡಿತ್ತು. ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿದ್ದು, ತುರ್ತು ಪ್ರತಿಕ್ರಿಯೆ ತಂಡಗಳನ್ನ ನಿಯೋಜಿಸಲಾಯ್ತು. ಅಪಘಾತದ ಕಾರಣವನ್ನು ಅಧಿಕಾರಿಗಳು ಇನ್ನೂ ದೃಢಪಡಿಸಿಲ್ಲ.
#WATCH | Gujarat: Union Home Minister Amit Shah arrives at the site of Ahmedabad plane crash.
Gujarat CM Bhupendra Patel, Civil Aviation Minister Ram Mohan Naidu Kinjarapu, MoS Civil Aviation Murlidhar Mohol and Gujarat Home Minister Harsh Sanghavi are also with him. pic.twitter.com/H0O8rbujro
— ANI (@ANI) June 12, 2025