ಬೆಂಗಳೂರು : ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ಕೋಟ್ಯಾಂತರ ರೂಪಾಯಿ ವಂಚನೆ ಎಸಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಸಹೋದರ ಗೋಪಾಲ್ ಜೋಶಿ ಅವರನ್ನು ಬೆಂಗಳೂರಿನ ಬಸವೇಶ್ವರ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಹೌದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ ಜೋಶಿಯನ್ನು ಅರೆಸ್ಟ್ ಮಾಡಿದ್ದಾರೆ. ಜೆಡಿಎಸ್ ಮಾಜಿ ಶಾಸಕ ದೇವಾನಂದ್ ಚೌಹಾಣ್ ಪತ್ನಿ ಸುನಿತಾ ಚೌಹಾಣ್ ಅವರ ಬಳಿ ಲೋಕಸಭೆ ಚುನಾವಣೆಗೆ ಟಿಕೆಟ್ ಕೊಡಿಸುವುದಾಗಿ ಕೋಟ್ಯಾಂತರ ರೂಪಾಯಿ ವಂಚನೆ ಎಸಗಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಪ್ರಹ್ಲಾದ ಜೋಶಿ ಅವರ ಸಹೋದರ ಗೋಪಾಲ್ ಜೋಶಿ ಅವರನ್ನು ಇದೀಗ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಪ್ರಕರಣ ಹಿನ್ನೆಲೆ
ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಕೋಟ್ಯಂತರ ರೂ. ಪಡೆದು ವಂಚಿಸಿದ ಆರೋಪದಡಿ ಇಲ್ಲಿನ ಬಸವೇಶ್ವರ ಪೊಲೀಸ್ ಠಾಣೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ಸಹೋದರಿ ವಿಜಯ ಲಕ್ಷ್ಮೀ ಜೋಶಿ ಸಹಿತ ಮೂವರ ವಿರುದ್ಧ ಬೆಂಗಳೂರಿನ ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು.ಸುನೀತಾ ಚವ್ಹಾಣ್ ಎಂಬುವರು ನೀಡಿದ ದೂರಿನನ್ವಯ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ಜೋಶಿ, ವಿಜಯ್ ಲಕ್ಷ್ಮೀ ಜೋಶಿ, ಅಜಯ್ ಜೋಶಿ ಎಂಬವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ಜೋಶಿ, ಸಹೋದರಿ ವಿಜಯ ಲಕ್ಷ್ಮಿ ಜೋಶಿ ಹಾಗೂ ಗೋಪಾಲ್ ಜೋಶಿ ಮಗ ಅಜಯ್ ಜೋಶಿ ಭರವಸೆ ನೀಡಿ ಎರಡು ಕೋಟಿ ರೂಪಾಯಿ ಪಡೆದು ಟಿಕೆಟ್ ಕೊಡಿಸದೆ, ಹಣವನ್ನ ವಾಪಸ್ ನೀಡದೆ ಮೋಸ ಮಾಡಿದ್ದಾರೆ.ಹಣ ವಾಪಾಸ್ ಕೇಳಿದಾಗ ಗೂಂಡಾಗಳಿಂದ ಬೆದರಿಸಿ ಜಾತಿ ನಿಂದನೆ ಮಾಡಿದ್ದಾರೆ ಎಂದು ಮಾಜಿ ಶಾಸಕ ದೇವಾನಂದ್ ಫುಲ್ ಸಿಂಗ್ ಅವರ ಪತ್ನಿ ಸುನೀತಾ ಚವ್ಹಾಣ್ ಅವರು ಪೊಲೀಸರಿಗೆ ದೂರು ನೀಡಿದ್ದಾರೆ ಎಂದು ತಿಳಿದುಬಂದಿದೆ.