ಬೆಂಗಳೂರು : ಬೆಂಗಳೂರಿನ ನಗರತ್ ಪೇಟೆಯಲ್ಲಿ ಯುವಕನ ಮೇಲೆ ಹಲ್ಲೆ ಪ್ರಕರಣ ಸಂಬಂಧ ಪ್ರತಿಭಟನೆ ನಡೆಸುತ್ತಿದ್ದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬೆಂಗಳೂರಿನ ಮೊಬೈಲ್ ಶಾಪ್ ನಲ್ಲಿ ಹನುಮಾನ್ ಚಾಲೀಸಾ ಹಾಕಿದ್ದಕ್ಕೆb ಯುವಕನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ವೇಳೆ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸದ್ಯ ನಗರತ್ ಪೇಟೆಯಲ್ಲಿ ಉದ್ವಿಗ್ನ ಪರಿಸ್ಥಿತಿ ಇದೆ.
ಬೆಂಗಳೂರಿನ ತರಗಪೇಟೆಯಲ್ಲಿ ಕಿಡಿಗೇಡಿಗಳು ಮೊಬೈಲ್ ಶಾಪ್ ನಡೆಸುತ್ತಿದ್ದ ಯುವಕನ ಮೇಲೆ ಮನಸೋಇಚ್ಛೆ ಹಲ್ಲೆ ನಡೆಸಿದ್ದರು. ಬಳಿಕ ಯುವಕ ನೀಡಿದ ದೂರಿನ ಮೇರೆಗೆ ಹಲ್ಲೆ ಮಾಡಿದ್ದ ಸುಲೇಮಾನ್, ತರುಣ್, ಶನವಾಜ್, ರೋಹಿತ್, ಡ್ಯಾನಿಶ್ ವಿರುದ್ಧ ಪೊಲೀಸರು ಐಪಿಸಿ ಸೆಕ್ಷನ್ 506, 504, 149, 307, 323 ಹಾಗೂ 324ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ.