ಚಿಕ್ಕಮಗಳೂರು : ತಿರುಪತಿಯ ಶ್ರೀ ವೆಂಕಟೇಶ್ವರನ ದರ್ಶನಕ್ಕಾಗಿ ಪ್ರಯಾಣಿಸುವ ರಾಜ್ಯದ ಭಕ್ತರಿಗೆ ಸಿಹಿಸುದ್ದಿ ಸಿಕ್ಕಿದ್ದು, ಚಿಕ್ಕಮಗಳೂರಿನಿಂದ ತಿರುಪತಿಗೆ ನೂತನ ರೈಲು ಸಂಚಾರಕ್ಕೆ ಕೇಂದ್ರ ಸಚಿವ ವಿ.ಸೋಮಣ್ಣ ಚಾಲನೆ ನೀಡಿದ್ದಾರೆ.
ತಿರುಪತಿಯ ಶ್ರೀ ವೆಂಕಟೇಶ್ವರನ ದರ್ಶನಕ್ಕಾಗಿ ಪ್ರಯಾಣಿಸುವ ಮಲೆನಾಡು, ತುಮಕೂರು, ಬೆಂಗಳೂರು ಹಾಗೂ ಕೋಲಾರ ಭಾಗದ ಭಕ್ತರಿಗೆ ಸೌಲಭ್ಯ ಕಲ್ಪಿಸಲು ಚಿಕ್ಕಮಗಳೂರಿನಿಂದ ತಿರುಪತಿಗೆ ನೂತನ ವಾರದ ರೈಲಿನ (Weekly Train) ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಪ್ರತಿ ಗುರುವಾರ ತಿರುಪತಿಯಿಂದ ಹಾಗೂ ಪ್ರತಿ ಶುಕ್ರವಾರ ಚಿಕ್ಕಮಗಳೂರಿನಿಂದ ಈ ರೈಲು ಹೊರಡಲಿದೆ.
ಇಂದು ಚಿಕ್ಕಮಗಳೂರಿನಲ್ಲಿ ಕೇಂದ್ರ ಸಚಿವ ವಿ ಸೋಮಣ್ಣ ಅವರು ಚಿಕ್ಕಮಗಳೂರು-ತಿರುಪತಿ ರೈಲು ಸಂಚಾರಕ್ಕೆ ಚಾಲನೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಬಿಜೆಪಿ ಎಂಎಲ್ ಸಿ ಸಿ.ಟಿ ರವಿ, ಕೋಟ ಶ್ರೀನಿವಾಸ್ ಪೂಜಾರಿ ಸೇರಿದಂತೆ ಮತ್ತಿತರರಿದ್ದರು.
ರೈಲಿನ ವಿವರ
ತಿರುಪತಿ-ಚಿಕ್ಕಮಗಳೂರು (ರೈಲು ಸಂಖ್ಯೆ 17423) : ಈ ರೈಲು ಪ್ರತಿ ಗುರುವಾರ ರಾತ್ರಿ 09.00 ಗಂಟೆಗೆ ತಿರುಪತಿಯಿಂದ ಹೊರಡಲಿದ್ದು ಮರುದಿನ ಶುಕ್ರವಾರ ಬೆಳಿಗ್ಗೆ 10.30 ಕ್ಕೆ ಚಿಕ್ಕಮಗಳೂರು ತಲುಪಲಿದೆ.
ಚಿಕ್ಕಮಗಳೂರು-ತಿರುಪತಿ (ರೈಲು ಸಂಖ್ಯೆ 17424) : ಈ ರೈಲು ಪ್ರತಿ ಶುಕ್ರವಾರ ಸಂಜೆ 05:30 ಚಿಕ್ಕಮಗಳೂರಿನಿಂದ ಹೊರಡಲಿದ್ದು ಶನಿವಾರ ಬೆಳಿಗ್ಗೆ 07:40ಕ್ಕೆ ತಿರುಪತಿ ತಲುಪಲಿದೆ.
ನಿಲ್ದಾಣಗಳು : ಚಿತ್ತೂರು, ಕಟ್ಟಾಡಿ, ಕುಪ್ಪಂ, ಬಂಗಾರಪೇಟೆ, ವೈಟ್ಫೀಲ್ಡ್ ಕೆ ಆರ್ ಪುರಂ, ಎಸ್ಎಂವಿಬಿ ಬೆಂಗಳೂರು, ಚಿಕ್ಕ ಬಾಣಾವರ, ತುಮಕೂರು, ತಿಪಟೂರು, ಅರಸೀಕೆರೆ, ದೇವನೂರು, ಬಿರೂರು, ಕಡೂರು, ಬಿಸಲೇಹಳ್ಳಿ, ಸಕರಾಯಪಟ್ಟಣ.
ಚಿಕ್ಕಮಗಳೂರು-ತಿರುಪತಿ ಸಾಪ್ತಾಹಿಕ ಎಕ್ಸ್‌ಪ್ರೆಸ್ ರೈಲಿಗೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು, ಬೆಂಗಳೂರಿನಿಂದ ಚಿಕ್ಕಮಗಳೂರಿಗೆ ರೈಲ್ವೆ ಅಧಿಕಾರಿಗಳು ಹಾಗೂ ಶೃಂಗೇರಿ ಶಾಸಕರಾದ ಶ್ರೀ ಟಿ.ಡಿ ರಾಜೇಗೌಡ ಅವರೊಂದಿಗೆ ವಿಶೇಷ ರೈಲಿನಲ್ಲಿ ಪ್ರಯಾಣಿಸಲಾಯಿತು.
Traveled from Bengaluru to Chikkamagaluru on a special train… pic.twitter.com/853KqCzxkj
— V. Somanna (@VSOMANNA_BJP) July 11, 2025
ತಿರುಪತಿಯ ಶ್ರೀ ವೆಂಕಟೇಶ್ವರನ ದರ್ಶನಕ್ಕಾಗಿ ಪ್ರಯಾಣಿಸುವ ಮಲೆನಾಡು, ತುಮಕೂರು, ಬೆಂಗಳೂರು ಹಾಗೂ ಕೋಲಾರ ಭಾಗದ ಭಕ್ತರಿಗೆ ಸೌಲಭ್ಯ ಕಲ್ಪಿಸಲು ಚಿಕ್ಕಮಗಳೂರಿನಿಂದ ತಿರುಪತಿಗೆ ನೂತನ ವಾರದ ರೈಲಿನ (Weekly Train) ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಪ್ರತಿ ಗುರುವಾರ ತಿರುಪತಿಯಿಂದ ಹಾಗೂ ಪ್ರತಿ ಶುಕ್ರವಾರ ಚಿಕ್ಕಮಗಳೂರಿನಿಂದ ಈ ರೈಲು… pic.twitter.com/apW3Wfx78a
— V. Somanna (@VSOMANNA_BJP) June 28, 2025