ಬೆಂಗಳೂರು: ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ ಅವರ ಹಿರಿಯ ಸಹೋದರಿ ಮಹಾದೇವಮ್ಮ (96) ಅವರು ಇಂದು (ಮಾರ್ಚ್ 5, 2026) ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ.
ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಚಿಕ್ಕಮುದುವಾಡಿ ಗ್ರಾಮದಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ. ಕಳೆದ ಕೆಲವು ದಿನಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತಾದರೂ, ಚಿಕಿತ್ಸೆ ಫಲಕಾರಿಯಾಗದೆ ಇಂದು ಇಹಲೋಕ ತ್ಯಜಿಸಿದ್ದಾರೆ.
ಈ ಕುರಿತು ಸಚಿವ ವಿ.ಸೋಮಣ್ಣ ಮಾಹಿತಿ ಹಂಚಿಕೊಂಡಿದ್ದು, ನನ್ನ ಹಿರಿಯ ಸಹೋದರಿ, ದಿವಂಗತ ಶ್ರೀ ವಿ. ಮುದ್ದಯ್ಯನವರ ಧರ್ಮಪತ್ನಿ ಶ್ರೀಮತಿ ಮಹದೇವಮ್ಮ(96ವರ್ಷ) ಇಂದು ಚಿಕ್ಕಮುದುವಾಡಿ ಗ್ರಾಮ, ಕನಕಪುರ ತಾಲ್ಲೂಕು, ರಾಮನಗರ ಜಿಲ್ಲೆಯಲ್ಲಿ ಸ್ವರ್ಗಸ್ಥರಾಗಿದ್ದಾರೆ ಎಂದು ತಿಳಿಸಲು ವಿಷಾದಿಸುತ್ತೇನೆ. ಮೃತರ ಅಂತಿಮಕ್ರಿಯೆಯನ್ನು ಇಂದು ಮಧ್ಯಾಹ್ನ 12 ಗಂಟೆಗೆ ಚಿಕ್ಕಮುದುವಾಡಿ ಗ್ರಾಮದಲ್ಲಿ ನೆರವೇರಿಸಲಾಗುವುದು ಎಂದು ತಿಳಿಸಿದ್ದಾರೆ.
ನನ್ನ ಹಿರಿಯ ಸಹೋದರಿ, ದಿವಂಗತ ಶ್ರೀ ವಿ. ಮುದ್ದಯ್ಯನವರ ಧರ್ಮಪತ್ನಿ ಶ್ರೀಮತಿ ಮಹದೇವಮ್ಮ(96ವರ್ಷ) ಇಂದು ಚಿಕ್ಕಮುದುವಾಡಿ ಗ್ರಾಮ, ಕನಕಪುರ ತಾಲ್ಲೂಕು, ರಾಮನಗರ ಜಿಲ್ಲೆಯಲ್ಲಿ ಸ್ವರ್ಗಸ್ಥರಾಗಿದ್ದಾರೆ ಎಂದು ತಿಳಿಸಲು ವಿಷಾದಿಸುತ್ತೇನೆ.
ಮೃತರ ಅಂತಿಮಕ್ರಿಯೆಯನ್ನು ಇಂದು ಮಧ್ಯಾಹ್ನ 12 ಗಂಟೆಗೆ ಚಿಕ್ಕಮುದುವಾಡಿ ಗ್ರಾಮದಲ್ಲಿ… pic.twitter.com/4F6BWb2v2C
— V. Somanna (@VSOMANNA_BJP) March 5, 2026








