ಬೆಂಗಳೂರು : ಸೂರಜ್ ರೇವಣ್ಣ ವಿರುದ್ಧದ ಅಸಹಜ ಲೈಂಗಿಕ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಕರಣದಿಂದ ಕೈಬಿಡುವಂತೆ ಕೋರಿದ ಮರುಪರಿಶೀಲನ ಅರ್ಜಿ ಇದೀಗ ಕೋರ್ಟ್ ವಜಾ ಗೊಳಿಸಿದೆ, ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಡ್ಜ್ ಸಂತೋಷ್ ಗಜಾನನ ಭಟ್ ಈ ಒಂದು ಆದೇಶ ಹೊರಡಿಸಿದ್ದಾರೆ.
ಹಾಸನ ಜಿಲ್ಲೆಯ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿತ್ತು. ಪ್ರಕರಣ ಸಂಬಂಧ ಸೂರಜ್ ರೇವಣ್ಣ ಮರು ಪರಿಶೀಲನ ಅರ್ಜಿಯನ್ನು ಸಲ್ಲಿಸಿದ್ದರು. ಇದೀಗ ಬೆಂಗಳೂರಿನಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಸಂತೋಷ್ ಗಜಾನನ ಭಟ್ ಅರ್ಜಿಯ ವಿಚಾರಣೆ ನಡೆಸಿ ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದ್ದಾರೆ.








