ಬೆಂಗಳೂರು : ಲೋಕಸಭೆ ಚುನಾವಣೆಯಲ್ಲಿ ಸಂಸದರಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಹೆಚ್.ಡಿ ಕುಮಾರಸ್ವಾಮಿ ಇಂದು ಚನ್ನಪಟ್ಟಣ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಕೇಂದ್ರದ ನೂತನ ಎನ್ಡಿಎ ಸರ್ಕಾರದಲ್ಲಿ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವರಾಗಿ ಅಧಿಕಾರ ವಹಿಸಿಕೊಂಡಿರುವ ಹೆಚ್.ಡಿ.ಕುಮಾರಸ್ವಾಮಿ ಇಂದು ವಿಧಾನಸೌಧದಲ್ಲಿ ಸ್ಪೀಕರ್ ಯು.ಟಿ. ಖಾದರ್ ಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.
ಹೆಚ್.ಡಿ ಕುಮಾರಸ್ವಾಮಿ ಇಂದು ಚನ್ನಪಟ್ಟಣ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಮುನ್ನ ಇಂದು ಬೆಳಗ್ಗೆ ತಿರುಪತಿಗೆ ಭೇಟಿ ನೀಡಿ ತಿಮ್ಮಪ್ಪನ ದರ್ಶನ ಪಡೆದಿದ್ದು, ಬಳಿಕ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.