ಕೆಎನ್‍ಎನ್‍ಡಿಜಿಟಲ್ ಡೆಸ್ಕ್ : ಉತ್ತರ ಪ್ರದೇಶ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆಯನ್ನ ರದ್ದುಗೊಳಿಸಲಾಗಿದೆ. ಮುಂದಿನ 6 ತಿಂಗಳಲ್ಲಿ ಮರು ಪರೀಕ್ಷೆ ನಡೆಸಲಾಗುವುದು ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್, “ಯುಪಿ ಪೊಲೀಸ್ ಕಾನ್ಸ್ಟೇಬಲ್ ಸಿವಿಲ್ ಪೊಲೀಸ್ ಪರೀಕ್ಷೆಗಳು 2023ನ್ನು ರದ್ದುಪಡಿಸಲಾಗಿದೆ, ಮುಂದಿನ 6 ತಿಂಗಳಲ್ಲಿ ಪರೀಕ್ಷೆಗಳನ್ನು ಮರು ನಡೆಸಲು ಆದೇಶ ನೀಡಲಾಗಿದೆ” ಎಂದು ಟ್ವೀಟ್ ಮಾಡಿದ್ದಾರೆ.
ಪರೀಕ್ಷೆಗಳ ಪಾವಿತ್ರ್ಯತೆಯೊಂದಿಗೆ ಯಾವುದೇ ರಾಜಿ ಮಾಡಿಕೊಳ್ಳಲು ಸಾಧ್ಯವಿಲ್ಲ. ಯುವಕರ ಕಠಿಣ ಪರಿಶ್ರಮದೊಂದಿಗೆ ಆಟವಾಡುವವರನ್ನು ಯಾವುದೇ ಸಂದರ್ಭದಲ್ಲೂ ಬಿಡುವುದಿಲ್ಲ. ಅಂತಹ ಅಶಿಸ್ತಿನ ಶಕ್ತಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವುದು ಖಚಿತ” ಎಂದು ಸಿಎಂ ಯೋಗಿ ಆದಿತ್ಯನಾಥ್ ಟ್ವೀಟ್ ಮಾಡಿದ್ದಾರೆ.
.@Uppolice आरक्षी नागरिक पुलिस के पदों पर चयन के लिए आयोजित परीक्षा-2023 को निरस्त करने तथा आगामी 06 माह के भीतर ही पुन: परीक्षा कराने के आदेश दिए हैं।
परीक्षाओं की शुचिता से कोई समझौता नहीं किया जा सकता।
युवाओं की मेहनत के साथ खिलवाड़ करने वाले किसी भी दशा में बख्शे नहीं…
— Yogi Adityanath (@myogiadityanath) February 24, 2024
ಸಾಮಾಜಿಕ ‘ಅಸಮಾನತೆ’ಯನ್ನು ತೊಡೆದು ಹಾಕುವುದು ಪ್ರತಿ ಸರ್ಕಾರದ ಜವಾಬ್ದಾರಿಯಾಗಬೇಕು : ಸಿಎಂ ಸಿದ್ದರಾಮಯ್ಯ
PM Kisan Yojana: ‘ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ’ 16ನೇ ಕಂತಿನ ದಿನಾಂಕ ಪ್ರಕಟ :ಇಲ್ಲಿದೆ ವಿವರ
Gmail Shutting Down: ಆಗಸ್ಟ್ ನಲ್ಲಿ ಜಿಮೇಲ್ ಸ್ಥಗಿತ? ಗೂಗಲ್ ಹೇಳಿದ್ದೇನು?