ಮೊರ್ಬಿ : ಗುಜರಾತ್ನ ಮೊರ್ಬಿಯಲ್ಲಿ ಭಾನುವಾರ (ಅಕ್ಟೋಬರ್ 30) ಕೇಬಲ್ ಸೇತುವೆ ಕುಸಿದು ಸುಮಾರು 400 ಜನರು ನದಿಗೆ ಬಿದ್ದಿದ್ದಾರೆ. ಇನ್ನು ಈ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 30ಕ್ಕೇ ಏರಿಕೆಯಾಗಿದ್ದು, ಸುಮಾರು100 ಮಂದಿಗೆ ಗಾಯಗೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಪ್ರಧಾನಿ ಮೋದಿ ಮೊರ್ಬಿಯಲ್ಲಿ ಸಂಭವಿಸಿದ ದುರಂತದಲ್ಲಿ ಪ್ರಾಣ ಕಳೆದುಕೊಂಡ ಪ್ರತಿಯೊಬ್ಬರ ಕುಟುಂಬಗಳಿಗೆ ಪಿ.ಎಂ.ಎನ್.ಆರ್.ಎಫ್.ನಿಂದ 2 ಲಕ್ಷ ರೂ.ಗಳ ಪರಿಹಾರವನ್ನು ಘೋಷಿಸಿದೆ. ಹಾಗೂ ಗಾಯಗೊಂಡವರಿಗೆ ತಲಾ 50,000 ರೂ. ಘೋಷಿಸಿದ್ದಾರೆ.
ರಕ್ಷಣಾ ತಂಡವನ್ನು ತಕ್ಷಣವೇ ಸ್ಥಳಕ್ಕೆ ಕಳುಹಿಸುವಂತೆ ಪ್ರಧಾನಿ ಮೋದಿ ಸಿಎಂ ಭೂಪೇಂದ್ರ ಪಟೇಲ್ ಅವ್ರಿಗೆ ಸೂಚಿಸಿದರು. ಸ್ವತಃ ಪರಿಸ್ಥಿತಿಯನ್ನ ಸೂಕ್ಷ್ಮವಾಗಿ ಮೇಲ್ವಿಚಾರಣೆ ಮಾಡುವಂತೆ ಮತ್ತು ರಕ್ಷಣಾ ಕಾರ್ಯಾಚರಣೆಯ ಉಸ್ತುವಾರಿಯನ್ನು ವಹಿಸಿಕೊಳ್ಳುವಂತೆ ಅವರು ಸಿಎಂಗೆ ನಿರ್ದೇಶನ ನೀಡಿದರು. ಘಟನೆಯಿಂದ ಬಾಧಿತರಾದವರಿಗೆ ಸಾಧ್ಯವಿರುವ ಎಲ್ಲಾ ಸಹಾಯವನ್ನ ಒದಗಿಸುವಂತೆ ಸೂಚಿಸಿದ್ದಾರೆ. ಅಪಘಾತದ ಸಮಯದಲ್ಲಿ ಸುಮಾರು 500 ಜನರು ಸೇತುವೆಯ ಮೇಲೆ ಹಾಜರಿದ್ದರು ಎನ್ನಲಾಗ್ತಿದೆ.
PM @narendramodi has announced an ex-gratia of Rs. 2 lakh from PMNRF for the next of kin of each of those who lost their lives in the mishap in Morbi. The injured would be given Rs. 50,000.
— PMO India (@PMOIndia) October 30, 2022
ಕುಂದಾನಗರಿ ಬೆಳಗಾವಿಯಲ್ಲಿ ನಡೆಯಲಿದೆ ಅದ್ದೂರಿ ‘ಕನ್ನಡ ರಾಜ್ಯೋತ್ಸವ’ : 50 ಸಾವಿರ ಕನ್ನಡಿಗರಿಗೆ ಹೋಳಿಗೆ ಊಟ