ಅಹ್ಮದಾಬಾದ್: ಗುಜರಾತ್ನ ಮೊರ್ಬಿಯಲ್ಲಿ ಬ್ರಿಟಿಷ್ ಕಾಲದ ಸೇತುವೆ ನವೀಕರಣಗೊಂಡ ಒಂದು ವಾರದ ನಂತ್ರ ಕುಸಿದು ಕನಿಷ್ಠ 60 ಜನರು ಸಾವನ್ನಪ್ಪಿದ್ದಾರೆ. ನದಿಗೆ ಬಿದ್ದ ಇನ್ನೂ 100ಕ್ಕೂ ಹೆಚ್ಚು ಜನರಿಗಾಗಿ ಶೋಧ ನಡೆಯುತ್ತಿದೆ. ದುರಂತದ ಜವಾಬ್ದಾರಿಯನ್ನು ಸರ್ಕಾರವೇ ವಹಿಸಿಕೊಂಡಿದೆ ಎಂದು ಸಚಿವರೊಬ್ಬರು ತಿಳಿಸಿದ್ದಾರೆ.
ಈವರಗೆ 60ಕ್ಕೂ ಹೆಚ್ಚು ಶವಗಳನ್ನ ವಶಪಡಿಸಿಕೊಳ್ಳಲಾಗಿದೆ, ಅದರಲ್ಲಿ ಹೆಚ್ಚಿನವರು ಮಕ್ಕಳು, ಮಹಿಳೆಯರು ಮತ್ತು ವೃದ್ಧರು ಸೇರಿದ್ದಾರೆ. ಇನ್ನು ಉಳಿದವರ ರಕ್ಷಣೆಗಾಗಿ ಎನ್ಡಿಆರ್ಎಫ್ ಕಾರ್ಯಾಚರಣೆ ಮುಂದುವರೆದಿದೆ. ಇನ್ನು ನಾವು ಈ ವಿಷಯವನ್ನ ಗಂಭೀರವಾಗಿ ಪರಿಗಣಿಸುತ್ತಿದ್ದೇವೆ, ಇದು ತುಂಬಾ ದುಃಖಕರವಾಗಿದೆ ಎಂದು ರಾಜ್ಕೋಟ್ನ ಬಿಜೆಪಿ ಸಂಸದ ಮೋಹನ್ಭಾಯ್ ಕಲ್ಯಾಣ್ಜಿ ಕುಂದಾರಿಯಾ ಹೇಳಿದ್ದಾರೆ.
Gujarat's Morbi cable bridge collapse | More than 60 bodies recovered, of which more are of children, women & elderly. Rest have been rescued; NDRF rescue op underway. We're taking this matter very seriously, it's very saddening: Mohanbhai Kalyanji Kundariya, BJP MP from Rajkot pic.twitter.com/SjIGxRsya5
— ANI (@ANI) October 30, 2022
ಈ ದುರಂತದ ಕುರಿತು ಗುಜರಾತ್ ಸಿಎಂ ಭೂಪೇಂದ್ರ ಪಟೇಲ್ ಅವರೊಂದಿಗೆ ಪ್ರಧಾನಿ ಮೋದಿ ಮಾತನಾಡಿದ್ದು, ಪರಿಹಾರ ಮತ್ತು ರಕ್ಷಣಾ ಕಾರ್ಯಗಳನ್ನ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಮೊರ್ಬಿ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪ್ರಧಾನಮಂತ್ರಿಗಳ ಪರಿಹಾರ ನಿಧಿಯಿಂದ 2 ಲಕ್ಷ ರೂ.ಗಳನ್ನ ಮತ್ತು ಗಾಯಗೊಂಡವರಿಗೆ 50,000 ರೂ.ಗಳನ್ನ ನೀಡಲಾಗುವುದು ಎಂದು ಪ್ರಧಾನಿ ಘೋಷಿಸಿದ್ದಾರೆ.
ಅಪಘಾತದ ಸಮಯದಲ್ಲಿ ಸುಮಾರು 400ರಿಂದ 500 ಜನರು ಸೇತುವೆಯ ಮೇಲೆ ಹಾಜರಿದ್ದರು ಎನ್ನಲಾಗ್ತಿದೆ.
ಅಂದ್ಹಾಗೆ, ಮಚ್ಚು ನದಿಗೆ ನಿರ್ಮಿಸಿರುವ ಈ ಸೇತುವೆಯನ್ನು 3 ದಿನಗಳ ಹಿಂದೆಯಷ್ಟೇ ಜನಸಾಮಾನ್ಯರಿಗೆ ಮುಕ್ತಗೊಳಿಸಲಾಗಿತ್ತು. ಹೀಗಿರುವಾಗ ಹೊಸದಾಗಿ ನಿರ್ಮಿಸಿರುವ ಸೇತುವೆ ಒಡೆಯುವುದಾದರೂ ಹೇಗೆ ಎಂಬ ಪ್ರಶ್ನೆ ಎದ್ದಿದೆ.
ಮಾಧ್ಯಮ ವರದಿಗಳ ಪ್ರಕಾರ, ಈ ಸೇತುವೆಯನ್ನು ಕಳೆದ ಏಳು ತಿಂಗಳಿಂದ ಮುಚ್ಚಲಾಗಿದ್ದು, ಫಿಟ್ನೆಸ್ ಪ್ರಮಾಣಪತ್ರವನ್ನು ಪಡೆಯದೆ ಮೂರು ದಿನಗಳ ಹಿಂದೆ ಇದನ್ನ ಸಾರ್ವಜನಿಕರಿಗೆ ತೆರೆಯಲಾಗಿದೆ ಎಂದು ವರದಿಯಾಗಿದೆ.
ಹರಿಯಾಣ ಉಪಚುನಾವಣೆ ಹಿನ್ನೆಲೆ : ನಾಳೆ ಆದಂಪುರದಲ್ಲಿ ರೋಡ್ ಶೋ ನಡೆಸಲಿರುವ ಸಿಎಂ ಅರವಿಂದ್ ಕೇಜ್ರಿವಾಲ್
ನನ್ನ ಗೆಳೆಯನಿಂದ 1.5 ಕೋಟಿ ಸಾಲ ನಾನು ಪಡೆದಿದ್ದು ನಿಜ, ಸಾಲ ಪಡೆಯೋದು ಅಪರಾಧವೇ- ಸಿದ್ಧರಾಮಯ್ಯ ಪ್ರಶ್ನೆ
BIGG NEWS : ‘ಕಾಂತಾರ’ ಸಿನಿಮಾ ಎಫೆಕ್ಟ್ : ಇದೇ ಮೊದಲ ಸಲ ದೈವ ನರ್ತಕರಿಗೆ ‘ರಾಜ್ಯೋತ್ಸವ ಪ್ರಶಸ್ತಿ’