ಬಳ್ಳಾರಿ : ಬಳ್ಳಾರಿಯಲ್ಲಿ ಶಾಸಕ ಜನಾರ್ದನ ರೆಡ್ಡಿ ಮನೆಯ ಮುಂದೆ ಅಡ್ಡಲಾಗಿ ಬ್ಯಾನರ್ ಕಟ್ಟಿರುವ ವಿಚಾರಕ್ಕೆ ಸಂಬಂಧಪಟ್ಟಂತೆ ಗಲಾಟೆ ನಡೆದು, ಈ ವೇಳೆ ಫೈರಿಂಗ್ ಆಗಿ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಸಾವನಪ್ಪಿದ್ದಾರೆ ಇದೀಗ ಈ ಒಂದು ಘಟನೆಗೆ ಸಂಬಂಧಪಟ್ಟಂತೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.
ಘಟನೆಗೆ ಸಂಬಂಧಪಟ್ಟಂತೆ, ಶಾಸಕ ಜನಾರ್ಧನ್ ರೆಡ್ಡಿ ಖಾಸಗಿ ಗನ್ ಮ್ಯಾನ್ಗಳ 3 ಗನ್ ಗಳನ್ನು ಪೊಲೀಸರು ಸೀಜ್ ಮಾಡಿದ್ದಾರೆ. ಸೀಜ್ ಮಾಡಿದ ಗನ್ ಗಳನ್ನು ಪೊಲೀಸರು ಎಫ್ ಎಸ್ ಎಲ್ ಗೆ ಕಳುಹಿಸಿದ್ದಾರೆ. ಜನಾರ್ಧನ ರೆಡ್ಡಿಯ ಖಾಸಗಿ ಗನ್ ಮ್ಯಾನ್ ಗಳ ಗನ್ ಪರಿಶೀಲನೆ ಮಾಡಲಾಗುತ್ತಿದೆ. ಜನಾರ್ಧನ ರೆಡ್ಡಿ ಗನ್ ಮ್ಯಾನ್ ಗಳ ಗನ್ ನಿಂದ ಬುಲೆಟ್ ಬಳಕೆ ಆಗದಿರುವುದು ಪತ್ತೆಯಾಗಿದ್ದು, ಪೊಲೀಸ್ ಉನ್ನತ ಮೂಲಗಳಿಂದ ಮಾಹಿತಿ ತಿಳಿದು ಬಂದಿದೆ.







