ನವದೆಹಲಿ: 26/11 ಮುಂಬೈ ದಾಳಿಯಲ್ಲಿ ಭಾಗಿಯಾಗಿರುವ ಪಾಕಿಸ್ತಾನ ಮೂಲದ ಕೆನಡಾದ ಉದ್ಯಮಿ ತಹಹ್ವೂರ್ ರಾಣಾ ನನ್ನು ನನ್ನು ಭಾರತಕ್ಕೆ ಹಸ್ತಾಂತರಿಸಲು ಅಮೆರಿಕ ಸುಪ್ರೀಂಕೋರ್ಟ್ ಒಪ್ಪಿಗೆ ನೀಡಿದೆ. ಈ ಮೂಲಕ ಭಾರತಕ್ಕೆ ರಾಜತಾಂತ್ರಿಕೆ ಗೆಲುವು ಸಿಕ್ಕಿದೆ.
ಯುಎಸ್ ಸುಪ್ರೀಂಕೋರ್ಟ್ ಒಂಬತ್ತನೇ ಸರ್ಕ್ಯೂಟ್ ಉಭಯ ದೇಶಗಳ ನಡುವಿನ ಹಸ್ತಾಂತರ ಒಪ್ಪಂದದ ಅಡಿಯಲ್ಲಿ ತಹವೂರ್ ರಾಣಾ ಅವರನ್ನು ಭಾರತಕ್ಕೆ ಹಸ್ತಾಂತರಿಸಬಹುದು ಎಂದು ತೀರ್ಪು ನೀಡಿದೆ.
ಮುಂಬೈನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾದ ಆರೋಪದ ಮೇಲೆ ರಾಣಾ ಅವರನ್ನು ಭಾರತಕ್ಕೆ ಹಸ್ತಾಂತರಿಸಬಹುದು ಎಂದು ಮ್ಯಾಜಿಸ್ಟ್ರೇಟ್ ನ್ಯಾಯಾಧೀಶರು ಪ್ರಮಾಣೀಕರಿಸಿದ್ದನ್ನು ಪ್ರಶ್ನಿಸಿ ತಹವೂರ್ ಹುಸೇನ್ ರಾಣಾ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ.