ಉತ್ತರಕನ್ನಡ : ರಾಜ್ಯದಲ್ಲಿ ಈಗಾಗಲೇ ಭಾರಿ ಮಳೆಯಾಗುತ್ತಿದ್ದು, ಇದೀಗ ಉತ್ತರಕನ್ನಡ ಜಿಲ್ಲೆಯಲ್ಲಿ ಕಾಲು ಜಾರಿಬಿದ್ದು ಕಾಳಿ ನದಿಗೆ ಬಿದ್ದು ಯುವಕನೋರ್ವ ನಾಪತ್ತೆಯಾಗಿರುವ ಘಟನೆ ಜಿಲ್ಲೆಯ ಕಾರವಾರ ತಾಲೂಕಿನ ಸುಂಕೇರಿ ಗ್ರಾಮದಲ್ಲಿ ನಡೆದಿದೆ. ಕಾಳಿ ನದಿಯಲ್ಲಿ ನಾಪತ್ತೆಯಾದ ಯುವಕನನ್ನು ಸಂತೋಷ್ (35) ಎಂದು ತಿಳಿದುಬಂದಿದೆ.
ನಿನ್ನೆ ರಾತ್ರಿ ಸಂತೋಷ್ ಸುಂಕೇರಿ ಸೇತುವೆಯ ಬಳಿ ಕಾಲು ಜಾರಿ ಕಾಳಿ ನದಿಗೆ ಬಿದ್ದಿದ್ದ ಇದೀಗ ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ, ಪೊಲೀಸರು ಹಾಗು ಸ್ಥಳೀಯರು ಯುವಕನಿಗಾಗಿ ಶೋಧ ಕಾರ್ಯ ಮುಂದುವರೆಸಿದ್ದಾರೆ. ರಬ್ಬರ್ ಬೋಟ್ ಸಹಾಯದಿಂದ ಹುಡುಕಾಟ ನಡೆಸಲಾಗುತ್ತಿದೆ. ಘಟನೆ ಕುರಿತು ಕಾರವಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.