ನವದೆಹಲಿ : 2022 ರ ಅಂಕಿತಾ ಭಂಡಾರಿ ಕೊಲೆ ಪ್ರಕರಣ ಸಂಬಂಧ ಉತ್ತರಾಖಂಡದ ಕೋಟ್ದ್ವಾರದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರ ನ್ಯಾಯಾಲಯದಲ್ಲಿ ಅಂಕಿತಾ ಕೊಲೆಗೆ ಪುಲ್ಕಿತ್ ಆರ್ಯ, ಸೌರಭ್ ಭಾಸ್ಕರ್ ಮತ್ತು ಅಂಕಿತ್ ಗುಪ್ತಾ ಎಂಬ ಮೂವರು ಆರೋಪಿಗಳು ತಪ್ಪಿತಸ್ಥರು ಎಂದು ಸಾಬೀತಾಗಿದೆ.
ಉತ್ತರಾಖಂಡ್ ಹೋಟೆಲ್ ಸ್ವಾಗತಕಾರ ಅಂಕಿತಾ ಭಂಡಾರಿ ಕೊಲೆ ಪ್ರಕರಣದಲ್ಲಿ ಮಾಜಿ ಬಿಜೆಪಿ ನಾಯಕನ ಮಗ, ಇತರ ಇಬ್ಬರು ದೋಷಿಗಳು ಎಂದು ಕೋರ್ಟ್ ತೀರ್ಪು ನೀಡಿದ್ದು, ಮೂವರು ಆರೋಪಿಗಳ ವಿರುದ್ಧ ಶಿಕ್ಷೆಯ ಪ್ರಮಾಣವನ್ನು ಇನ್ನೂ ಪ್ರಕಟಿಸಲಾಗಿಲ್ಲ ಎಂದು ಅಂಕಿತಾ ಅವರ ವಕೀಲ ಅಜಯ್ ಪಂತ್ ತಿಳಿಸಿದ್ದಾರೆ.
2022 Ankita Bhandari murder case: Three accused, Pulkit Arya, Saurabh Bhaskar, and Ankit Gupta, have been found guilty of Ankita's murder in the Additional District and Sessions Judge Court, Kotdwar, Uttarakhand. The sentence against the three accused is yet to be announced:…
— ANI (@ANI) May 30, 2025