ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಾಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ ಅವರು ಇಂದು ಬೆಂಗಳೂರಿನ ಶಾಂತಿನಗರದಲ್ಲಿರುವ ಇಡಿ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ.
ಹೌದು ನಿಗಮದಲ್ಲಿ ನಡೆದಿರುವಂತಹ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ವಿಚಾರಣೆಗೆ ಹಾಜಾರಾಗುವಂತೆ ಇಡಿ ನೋಟಿಸ್ ನೀಡಿತ್ತು. ಈ ಹಿನ್ನೆಲೆಯಲ್ಲಿ ವಾಲ್ಮೀಕಿ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ ಇದೀಗ ವಿಚಾರಣೆ ಹಾಜರಾಗಿದ್ದಾರೆ. ಬೆಂಗಳೂರಿನ ಶಾಂತಿನಗರದ ಇಡಿ ಕಚೇರಿಯಲ್ಲಿ ಬಸನಗೌಡ ದದಲ್ಲಿ ವಿಚಾರಣೆಗೆ ಹಾಜರಾಗಿದ್ದಾರೆ.
ಈ ಹಿಂದೆ ಬಸನಗೌಡ ದದ್ದಲ್ ಅವರಿಗೆ ಎಸ್ಐಟಿ ಅಧಿಕಾರಿಗಳು ಮೂರು ಬಾರಿ ನೋಟಿಸ್ ನೀಡಿದರು. ಬಳಿಕ ಎಸ್ಐಟಿ ವಿಚಾರಣೆಗೆ ಹಾಜರಾದ ಅವರು, ನನ್ನನ್ನು ಅರೆಸ್ಟ್ ಮಾಡಿ ಎಂದು ಎಸ್ಐಟಿ ಅಧಿಕಾರಿಗಳ ಮುಂದೆ ಮನವಿ ಮಾಡಿದರು. ಅದಾದ ಬಳಿಕ ಅವರು ಎಲ್ಲಿಯೂ ಕಾಣಿಸದೆ ನಾಪತ್ತೆಯಾಗಿದ್ದರು.
ಕಳೆದ ಜುಲೈ 15 ರಂದು ವಿಧಾನ ಮಂಡಲ ಅಧಿವೇಶನ ಆರಂಭವಾಗುತ್ತಿದ್ದಂತೆ ತಕ್ಷಣ ವಿಧಾನಸೌಧದಲ್ಲಿ ದದ್ದಲ್ ಅವರು ಪ್ರತ್ಯಕ್ಷರಾಗಿದ್ದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನಾನು ಎಲ್ಲಿಯೂ ನಾಪತ್ತೆಯಾಗಿಲ್ಲ. ಊರಿಗೆ ಹೋಗಿದ್ದೆ ಎಂದು ತಿಳಿಸಿದರು. ಇದೀಗ ಇಡಿ ಅಧಿಕಾರಿಗಳ ಮುಂದೆ ಬಸನಗೌಡ ದದ್ದಲ್ ಅವರು ವಿಚಾರಣೆಗೆ ಹಾಜರಾಗಿದ್ದಾರೆ.