ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ ಸಂಬಂಧ ತನಿಖೆ ನಡೆಸುತ್ತಿರುವ ಎಸ್ ಐಟಿ ಅಧಿಕಾರಿಗಳು ಇದೀಗ ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ.
ವಾಲ್ಮೀಕಿ ನಿಗಮ ಹಗರಣದ ಹಣ ಸಾಗಣಿಕೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಬಿಎಸ್ ಎನ್ ಎಲ್ ನ ಮಹಿಳಾ ಅಧಿಕಾರಿಯೊಬ್ಬರ ಪತಿ ಆಂಧ್ರಪ್ರದೇಶದ ವಿಶಾಖಪಟ್ಟಣ ಮೂಲದ ಕಾಕಿ ಶ್ರೀನಿವಾಸ್ ರಾವ್ ನನ್ನು ಎಸ್ ಐಟಿ ಅಧಿಕಾರಿಗಳು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.
ವಾಲ್ಮೀಕಿ ನಿಗಮ ಹಗರಣ ಪ್ರಕರಣದಲ್ಲಿ ಹವಾಲಾ ಮೂಲಕ ಆರೋಪಿಗಳ ಕೈಗೆ ಹಣ ಸೇರುವಂತೆ ಮಾಡಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಶ್ರೀನಿವಾಸರಾವ್ ನನ್ನು ವಶಕ್ಕೆ ಪಡೆದಿರುವ ಎಸ್ ಐಟಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.