ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಂತಹ ಕೋಟ್ಯಾಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಇಡಿ ಅಧಿಕಾರಿಗಳು ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತ ತನಿಖಾ ವರದಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿತು.
ಹೌದು, ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಂತ ಹಗರಣದ ಕುರಿತಂತೆ, ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಇಡಿ ವರದಿ ಸಲ್ಲಿಸಿತು. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ಇಡಿ ಈ ಕುರಿತು ಮಾಹಿತಿ ಹಂಚಿಕೊಂಡಿದೆ. ಇಡಿ ಸಲ್ಲಿಸಿರುವ ವರದಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಪರಿಜ್ಞಾನಕ್ಕೆ ಪಡೆದಿದೆ.
ED, Bengaluru has filed a Prosecution Complaint (PC) before the Hon’ble Special Court for MPs and MLAs in Bangalore in relation to the Karnataka Maharishi Valmiki ST Development Corporation Scam. The Hon’ble Court has taken cognizance of the PC.
— ED (@dir_ed) October 9, 2024