ಚಿಕ್ಕಮಗಳೂರು : ಚಿಕ್ಕಮಗಳೂರಿನಲ್ಲಿ ಘೋರ ಘಟನೆಯೊಂದು ನಡೆದಿದ್ದು, ವಾಮಾಚಾರದ ಆತಂಕ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಚಿಕ್ಕಮಗಳೂರು ತಾಲೂಕಿನ ಭಕ್ತರಹಳ್ಳಿ ಗ್ರಾಮದಲ್ಲಿ ಜಯಂತಿ (29) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಜಯಂತಿ ವಿರುದ್ಧ ಗ್ರಾಮದ ಇಬ್ಬರು ಮಾಟಮಂತ್ರ ಮಾಡಿರುವ ಆರೋಪ ಮಾಡಿದ್ದಾರೆ.
10 ವರ್ಷದ ಹಿಂದೆ ಮಂಜುನಾಥ್ ನನ್ನು ಮದುವೆಯಾಗಿದ್ದ ಜಯಂತಿ ಇದೀಗ ವಾಮಾಚಾರದ ಆರೋಪದ ಹಿನ್ನೆಲೆಯಲ್ಲಿ ಡೆತ್ ನೋಟ್ ಬರೆದಿಟ್ಟು ಸೂಸೈಡ್ ಮಾಡಿಕೊಂಡಿದ್ದಾರೆ. ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.