ಬೆಂಗಳೂರು : ವರ್ತೂರು ಪ್ರಕಾಶ್ ಆಪ್ತೆ ಶ್ವೇತಾ ವಂಚನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಮತ್ತೊರ್ವ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಆರೋಪಿ ಮೋಹನ್ ಲಾಲ್ ಎನ್ನುವ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಬೆಂಗಳೂರಿನ ಕಮರ್ಷಿಯಲ್ ಸ್ಟ್ರೀಟ್ ಪೊಲೀಸರಿಂದ ಆರೋಪಿಯನ್ನು ಬಂಧಿಸಲಾಗಿದೆ. ರಾಜಸ್ಥಾನದಲ್ಲಿ ಬೆಂಗಳೂರು ಪೊಲೀಸರು ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ ಎಂದು ತಿಳಿದುಬಂದಿದೆ.ಆರೋಪಿಗೆ ಶ್ವೇತಾ ಚಿನ್ನಾಭರಣ ಕೊಟ್ಟಿದ್ದ ಆರೋಪ ಕೇಳಿ ಬಂದಿತ್ತು. ಮೋಹನ್ ಲಾಲ್ ಗೆ ಸುಮಾರು 1ಕೆಜಿ 800 ಗ್ರಾಂ ಚಿನ್ನಾಭರಣ ಕೊಟ್ಟಿದ್ದ ಆರೋಪ ಕೇಳಿಬಂದಿತ್ತು.
ಈ ವಿಚಾರವಾಗಿ ಕೇಸ್ ದಾಖಲಾಗುತ್ತಿದ್ದಂತೆ ಆರೋಪಿ ಮೋಹನ್ ಲಾಲ್ ಪರಾರಿಯಾಗಿದ್ದ. ಸದ್ಯ ಆತನನ್ನು ರಾಜಸ್ಥಾನದಲ್ಲಿ ಬಂಧಿಸಿ ಬೆಂಗಳೂರು ಪೊಲೀಸರು ಕರೆತಂದಿದ್ದಾರೆ. ಆರೋಪಿಯನ್ನು ಕಸ್ಟಡಿಗೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ತಿಳಿದುಬಂದಿದೆ.