ಬೆಂಗಳೂರು : ಬೆಳಗಾವಿಯಲ್ಲಿ ಕಂಡಕ್ಟರ್ ಮೇಲೆ ಹಲ್ಲೆಯನ್ನು ಖಂಡಿಸಿ ಇಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ರಾಜಭವನ ಮುತ್ತಿಗೆಗೆ ಯತ್ನಿಸಿದರು. ಈ ವೇಳೆ ಅಲ್ಲಿಯೇ ನಿಯೋಜನೆಗೊಂಡಿದ್ದ ಪೊಲೀಸರು ತಕ್ಷಣ ವಾಟಾಳ್ ನಾಗರಾಜ್ ಅವರನ್ನು ವಶಕ್ಕೆ ಪಡೆದುಕೊಂಡು ಬಸ್ಸಿನಲ್ಲಿ ಕರೆದೋಯ್ದ ಘಟನೆ ನಡೆಯಿತು.
ಹೌದು ಬೆಂಗಳೂರಲ್ಲಿ ರಾಜಭವನ ಮುತ್ತಿಗೆಗೆ ವಾಟಾಳ್ ನಾಗರಾಜ್ ಯತ್ನಿಸಿದ್ದು, ಸದ್ಯ ವಾಟಳ್ ನಾಗರಾಜ್ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ವಶಕ್ಕೆ ಪಡೆದು ಬಸ್ ನಲ್ಲಿ ಪೊಲೀಸರು ಕರೆದುಕೊಂಡು ಹೋಗಿದ್ದಾರೆ. ಕನ್ನಡಿಗರ ಮೇಲೆ ಶಿವಸೇನೆ ದೌರ್ಜನ್ಯ ಎಸಗಿದ್ದನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದರು.