ಚಾಮರಾಜನಗರ : ಚಾಮರಾಜನಗರದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ತ್ರಿಬಲ್ ರೈಡಿಂಗ್ ಹೋಗುವಾಗ ಬಿದ್ದ ಬೈಕ್ ಸವಾರರ ಮೇಲೆ ವಾಹನವೊಂದು ಹರಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಚಾಮರಾಜನಗರ ತಾಲೂಕಿನ ಹರದನಹಳ್ಳಿ ಬಳಿ ಒಂದೇ ಬೈಕ್ ನಲ್ಲಿ ಮೂವರು ಹೋಗುತ್ತಿದ್ದ ವೇಳೆ ಸವಾರರು ಬೈಕ್ ನಿಂದ ಬಿದ್ದಿದ್ದಾರೆ. ಈ ವೇಳೆ ಹಿಂದಿನಿಂದ ಬರುತ್ತಿದ್ದ ವಾಹನ ಹರಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೊಬ್ಬರಿಗೆ ಗಂಭೀರ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಬ್ಯಾಡಮೂಡ್ಲು ಗ್ರಾಮದ ಅಭಿಷೇಕ್ (23) ಹಾಗೂ ಅಭಿ (21) ಮೃತ ದುರ್ದೈವಿಗಳು, ಗಂಭೀರವಾಗಿ ಗಾಯಗೊಂಡಿದ್ದ ಮಹದೇವ್ ಗೆ ಸಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಚಾಮರಾಜನಗರ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.