ಬೆಂಗಳೂರು : ಸಾರ್ವಜನಿಕರಿಗೆ ತೊಂದರೆ ಆಗುತ್ತದೆ ಎಂದರೆ ವಾಹನ ಟೋಯಿಂಗ್ ಆರಂಭಿಸುವುದಿಲ್ಲ ಎಂದು ಇಂದು ಬೆಳಿಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಹೇಳಿಕೆ ನೀಡಿದ್ದರು. ಅದಾದಮೇಲೆ ಇದೀಗ ಬೆಂಗಳೂರಿನಲ್ಲಿ ಮತ್ತೆ ಟೋಯಿಂಗ್ ಆರಂಭಿಸಲಾಗುತ್ತದೆ ಎಂದು ಸಹ ಗೃಹ ಸಚಿವ ಜಿ. ಪರಮೇಶ್ವರ್ ಅವರು ಅಧಿಕೃತವಾಗಿ ಹೇಳಿಕೆ ನೀಡಿದ್ದಾರೆ.
ಇನ್ನು ಮುಂದೆ ಬೆಂಗಳೂರಿನಲ್ಲಿ ಮತ್ತೆ ಟೋಯಿಂಗ್ ಶುರುವಾಗಲಿದೆ. ಟೋಯಿಂಗ್ ಆರಂಭದ ಬಗ್ಗೆ ಕೆಲ ದಿನಗಳಿಂದಲೇ ಚರ್ಚೆ ನಡೆಯುತ್ತಿತ್ತು. ಈಗ ಸರ್ಕಾರವೇ ಅಧಿಕೃತವಾಗಿ ಟೋಯಿಂಗ್ ಆರಂಭವಾಗುವ ಬಗ್ಗೆ ತಿಳಿಸಿದೆ. ಬಾಡಿಗೆ ಟೋಯಿಂಗ್ ವಾಹನ ಬಳಸದೇ ಇಲಾಖೆಯ ವಾಹನ ಬಳಸಿಕೊಂಡು ಟೋಯಿಂಗ್ ನಡೆಸಲು ಹಿರಿಯ ಅಧಿಕಾರಿಗಳಿಗೆ ಗೃಹ ಸಚಿವರು ಸೂಚನೆ ನೀಡಿದ್ದಾರೆ.