ರಾಮನಗರ : ಹಿರಿಯ ಪರಿಸರವಾದಿ ಭೂಹಳ್ಳಿ ಪುಟ್ಟಸ್ವಾಮಿ ಅವರು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಭಾನುವಾರ ತಡರಾತ್ರಿ ನಡೆದಿದೆ.
ಚನ್ನಪಟ್ಟಣ ತಾಲೂಕಿನ ಭೂಹಳ್ಳಿ ಗ್ರಾಮದ ನಿವಾಸಿಯಾಗಿರುವ ಭೂಹಳ್ಳಿ ಪುಟ್ಟಸ್ವಾಮಿ (76) ಆತ್ಮಹತ್ಯೆ ಮಾಡಿಕೊಂಡಿದ್ದು, ಫೇಸ್ ಬುಕ್ ನಲ್ಲಿ ಈ ಸಂಬಂಧ ಪೋಸ್ಟ್ ಹಾಕಿದ್ದು, ಅನಾರೋಗ್ಯದ ಕಾರಣದಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಹೇಳಿಕೊಂಡಿದ್ದಾರೆ. ಚನ್ನಪಟ್ಟಣ ಪಾರ್ವತಿ ಚಿತ್ರಮಂದಿರದ ರಸ್ತೆಯಲ್ಲಿ ರೂಮ್ ನಲ್ಲಿ ವಾಸಿವಿದ್ದ ಪುಟ್ಟಸ್ವಾಮಿ ರೂಮ್ ನಲ್ಲೇ ನೇಣು ಹಾಕಿಕೊಂಡಿದ್ದಾರೆ.