ಬೆಂಗಳೂರು : ಹಿರಿಯ ವಿದ್ವಾಂಸ, ಲೇಖಕ ಪ್ರೊ.ಮುಝಫರ್ ಹುಸೇನ್ ಅಸ್ಸಾದಿ (63) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ನಿಧನರಾಗಿದ್ದಾರೆ.
ನಿನ್ನೆ ತಡರಾತ್ರಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಪ್ರೋ. ಮುಝಫರ್ ಹುಸೇನ್ ಅಸ್ಸಾದಿ ಅವರು ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ.
ವಿದ್ವಾಂಸ, ಚಿಂತಕ, ಲೇಖಕ , ಮೈಸೂರು ವಿವಿಯ ಹಂಗಾಮಿ ಕುಲಪತಿಯಾಗಿ ಹಾಗೂ ರಾಜ್ಯಶಾಸ್ತ್ರ ವಿಭಾಗದ ಡೀನ್ ಆಗಿ ಸೇವೆ ಸಲ್ಲಿಸಿದ್ದ ಪ್ರೊ.ಮುಝಫರ್ ಅಸ್ಸಾದಿ ಅವರು ಬುಡಕಟ್ಟು ಸಮುದಾಯದವರ ಬದುಕು, ಜೀವನ ಶೈಲಿಯ ಬಗ್ಗೆ ಅಪಾರವಾದ ಅಧ್ಯಯನ ನಡೆಸಿದ್ದಾರೆ.