ಚಿತ್ರದುರ್ಗ : ಪ್ರಚೋದನಕಾರಿ ಭಾಷಣ, ಅವಹೇಳನಕಾರಿ ಹೇಳಿಕೆ ಮೂಲಕ ಸದಾ ವಿವಾದ ಸೃಷ್ಟಿಸಿ ಸುದ್ದಿಯಲ್ಲಿರುವ VHP ಪ್ರಾಂತ ಸಹ ಕಾರ್ಯದರ್ಶಿಯಾದ ಶರಣ್ ಪಂಪ್ವೆಲ್ ಗೆ ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7 ರವರೆಗೆ ಚಿತ್ರದುರ್ಗ ಜಿಲ್ಲೆಗೆ ಪ್ರವೇಶ ನಿರ್ಬಂಧಿಸಿ ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಅವರು ಆದೇಶ ಹೊರಡಿಸಿದ್ದಾರೆ.
ಹೌದು ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7 ರವರೆಗೆ ಚಿತ್ರದುರ್ಗ ಪ್ರವೇಶಕ್ಕೆ ವಿಧಿಸಲಾಗಿದೆ. ವಿ ಎಚ್ ಪಿ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ ವೆಲ್ ನಾಳೆ ಹಿಂದೂ ಮಹಾ ಗಣಪತಿ ಉತ್ಸವ ಕಾರ್ಯಕ್ರಮ ಇರುವ ಹಿನ್ನೆಲೆಯಲ್ಲಿ ಈ ಒಂದು ಕಾರ್ಯಕ್ರಮದಲ್ಲಿ ಶರಣ ಪಂಪೆಲ್ ಭಾಗವಹಿಸಬೇಕಾಗಿತ್ತು.
ಪ್ರಚೋದನೆ, ಅವಹೇಳನಕಾರಿ ಭಾಷಣ ಹಿನ್ನೆಲೆಯಲ್ಲಿ ಇದೀಗ ಅವರನ್ನು ಚಿತ್ರದುರ್ಗಕ್ಕೆ ನಿರ್ಬಂಧಿಸಲಾಗಿದೆ. ಕಾನೂನು ಮತ್ತು ಸುವ್ಯವಸ್ಥೆ ನಿಟ್ಟಿನಲ್ಲಿ ಅವರನ್ನು ಚಿತ್ರದುರ್ಗ ಪ್ರವೇಶಿಸದಂತೆ ನಿರ್ಬಂಧಿಸಲಾಗಿದೆ. ಈ ಕುರಿತು ಚಿತ್ರದುರ್ಗ ಜಿಲ್ಲಾಧಿಕಾರಿ ಟಿ ವೆಂಕಟೇಶ್ ಆದೇಶ ಹೊರಡಿಸಿದ್ದಾರೆ.