ನವದೆಹಲಿ:ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಕೂಡಲೇ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಇಂದು ಮುಂಜಾನೆ ಜಗದೀಪ್ ಧನ್ಕರ್ ಅವರ ಆರೋಗ್ಯದಲ್ಲಿ ಏರುಪೇರು ಕಂಡುಬಂದ ಹಿನ್ನೆಲೆಯಲ್ಲಿ ಅವರನ್ನು ಮುಂಜಾನೆ 2 ಗಂಟೆ ಸುಮಾರಿಗೆ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಏಮ್ಸ್ನ ಹೃದ್ರೋಗ ವಿಭಾಗದ ಮುಖ್ಯಸ್ಥ ಡಾ.ರಾಜೀವ್ ನಾರಂಗ್ ಅವರ ಅಡಿಯಲ್ಲಿ ಧನ್ಕರ್ ಅವರನ್ನು ತೀವ್ರ ನಿಗಾ ಘಟಕಕ್ಕೆ (ಸಿಸಿಯು) ದಾಖಲಿಸಲಾಗಿದೆ. ವೈದ್ಯರ ಗುಂಪು ಅವರ ಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
Vice President Jagdeep Dhankhar was admitted to the cardiac department at AIIMS Delhi in the early morning. He is stable and under observation: AIIMS Hospital Sources
— ANI (@ANI) March 9, 2025