ಬೆಂಗಳೂರು : ಜೋಂಬಿ ಡ್ರಗ್ಸ್ ಸೇವಿಸುತ್ತಿದ್ದ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ನಟ ದುನಿಯಾ ವಿಜಯ್ ಮತ್ತು ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರವರಿಗೆ ಸಂಕಷ್ಟೇ ದೂರಾಗಿದೆ ವಿಡಿಯೋ ಬಗ್ಗೆ ಸ್ಪಷ್ಟನೆ ಕೇಳಿ ಬಾಗಲೂರು ಠಾಣೆ ಪೊಲೀಸರು ನೋಟಿಸ್ ನೀಡಲಿದ್ದಾರೆ ಎಂದು ತಿಳಿದು ಬಂದಿದೆ.
ಈ ಒಂದು ವಿಡಿಯೋ ಕುರಿತಂತೆ ಸಮಾಜದ ಜಾಲತಾಣದಲ್ಲಿ ನಟ ವಿಜಯ್ ಮತ್ತು ಭಾಸ್ಕರ್ ರಾವ್ ವಿಡಿಯೋ ಅಪ್ಲೋಡ್ ಮಾಡಿದ್ದರು. ಪ್ರಕರಣ ಸಂಬಂಧ ಬಾಗಲೂರು ಪೊಲೀಸ್ ಸರು ತನಿಖೆ ಮುಂದುವರೆಸಿದ್ದಾರೆ ಈಗಾಗಲೇ ಈ ಒಂದು ವಿಡಿಯೋ ಹಂಚಿಕೊಂಡಿದ್ದ 15 ಜನರಿಗೆ ನೋಟಿಸ್ ನೀಡಿದ್ದಾರೆ ಮಾಹಿತಿಯ ಬಗ್ಗೆ ದಾಖಲೆ ಒದಗಿಸುವಂತೆ ಸೂಚನೆ ನೀಡಿದ್ದಾರೆ.
ದುನಿಯಾ ವಿಜಯ್ ಮತ್ತು ಭಾಸ್ಕರ್ ರಾವ್ ಈಗಾಗಲೇ ವಿಡಿಯೋ ಡಿಲೀಟ್ ಮಾಡಿದ್ದಾರೆ ಆ ವಿಡಿಯೋ ರಿಟ್ಯು ಮಾಡುವಂತೆ ಇನ್ಸ್ಟಾಗ್ರಾಂ ಗೆ ಪೊಲೀಸರು ಪತ್ರ ಬರೆದಿದ್ದಾರೆ ವಿಡಿಯೋ ಆದ ಬಳಿಕ ನೋಟಿಸ್ ಕೊಡಲು ಪೊಲೀಸರು ಚಿಂತನೆ ನಡೆಸಿದ್ದಾರೆ ವಿಡಿಯೋ ಬಗ್ಗೆ ಸ್ಪಷ್ಟನೆ ಕೇಳಿ ಬಾಗಲೂರು ಪೊಲೀಸರು ನೋಟಿಸ್ ನೀಡಲಿದ್ದಾರೆ ಹಾಗಾಗಿ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ದುನಿಯಾ ವಿಜಯ್ ಹಾಗೂ ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಗೆ ಸಂಕಷ್ಟ ಎದುರಾಗಿದೆ.








