ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಅಭೂತಪೂರ್ವ ಯಶಸ್ಸು ಸಾಧಿಸಿರುವ ‘ತಮಿಳಗ ವೆಟ್ರಿ ಕಳಗಂ’ (TVK) ಪಕ್ಷದ ನಾಯಕ ನಟ ವಿಜಯ್, ಇದೀಗ ಸರ್ಕಾರ ರಚನೆಯತ್ತ ದಾಪುಗಾಲು ಹಾಕಿದ್ದಾರೆ. ವಿಧಾನಸಭೆಯಲ್ಲಿ ತಮ್ಮ ಬಹುಮತವನ್ನು ಸಾಬೀತುಪಡಿಸಲು ಸಿದ್ಧವಿರುವುದಾಗಿ ತಿಳಿಸಿ ಅವರು ರಾಜ್ಯಪಾಲರಿಗೆ ಅಧಿಕೃತ ಪತ್ರ ಬರೆದಿದ್ದಾರೆ.
ತಮ್ಮ ಚೊಚ್ಚಲ ಚುನಾವಣೆಯಲ್ಲೇ ವಿಜಯ್ ನೇತೃತ್ವದ ಟಿ.ವಿ.ಕೆ ಪಕ್ಷವು ರಾಜ್ಯದ ಜನಮನ ಗೆಲ್ಲುವಲ್ಲಿ ಯಶಸ್ವಿಯಾಗಿದೆ. ರಾಜ್ಯದ 233 ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದ ಟಿ.ವಿ.ಕೆ, ಬರೊಬ್ಬರಿ 108 ಸ್ಥಾನಗಳಲ್ಲಿ ಜಯಗಳಿಸಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.
ಪಕ್ಷವು ಒಟ್ಟು 34.92% (1,72,26,209) ಮತಗಳನ್ನು ಪಡೆಯುವ ಮೂಲಕ ಪ್ರಬಲ ಶಕ್ತಿಯಾಗಿ ಗುರುತಿಸಿಕೊಂಡಿದೆ. ಖುದ್ದು ವಿಜಯ್ ಅವರು ಪೆರಂಬೂರ್ ಕ್ಷೇತ್ರದಲ್ಲಿ 53,715 ಮತಗಳ ಅಂತರದಿಂದ ಹಾಗೂ ತಿರುಚ್ಚಿ ಪೂರ್ವ ಕ್ಷೇತ್ರದಲ್ಲಿ 27,416 ಮತಗಳ ಅಂತರದಿಂದ ಭರ್ಜರಿ ಜಯ ದಾಖಲಿಸಿದ್ದಾರೆ.








