ವಿಜಯಪುರ : ವಿಜಯಪುರದಲ್ಲಿ ಖಾಸಗಿ ಆಸ್ಪತ್ರೆಯಲ್ಲಿಯೇ ವೈದ್ಯರು ಒಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿಜಯಪುರ ಜಿಲ್ಲೆಯ ತಾಳಿಕೋಟೆ ಪಟ್ಟಣದಲ್ಲಿ ಈ ಒಂದು ಘಟನೆ ನಡೆದಿದೆ. ಆತ್ಮಹತ್ಯೆಗೆ ಶರಣಾದ ವೈದ್ಯ ಡಾ. ರಾಜಶೇಖರ್ ಎಂದು ತಿಳಿದುಬಂದಿದೆ.
ಹೌದು ಆಸ್ಪತ್ರೆಯಲ್ಲಿಯೆ ನೇಣು ಬಿಗಿದುಕೊಂಡು ವೈದ್ಯ ಡಾ.ರಾಜಶೇಖರ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ವಿಜಯಪುರ ಜಿಲ್ಲೆಯ ತಾಳಿಕೋಟೆ ಪಟ್ಟಣದಲ್ಲಿ ಈ ಒಂದು ಘಟನೆ ನಡೆದಿದೆ. ತಾಳಿಕೋಟಿ ಪಟ್ಟಣದ ಶ್ರೀ ಸಾಯಿ ಆಸ್ಪತ್ರೆಯಲ್ಲಿ ಡಾ. ರಾಜಶೇಖರ್ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದರು. ವೈದ್ಯ ಡಾ. ರಾಜಶೇಖರ್ ಅವರ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.ತಾಳಿಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.