ವಿಜಯಪುರ : ಕೊಲೆ ಆರೋಪಿಯನ್ನು ಬಂಧಿಸಲು ತೆರಳಿದ ವೇಳೆ ಆರೋಪಿಯು ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದ ಈ ವೇಳೆ ಪೊಲೀಸರು ಆರೋಪಿ ಕಾಲಿಗೆ ಫೈರಿಂಗ್ ಮಾಡಿ ಬಂಧಿಸಿರುವ ಘಟನೆ ವಿಜಯಪುರ ನಗರದ ಹೊರವಲಯದ ಅಥಣಿ ರಸ್ತೆಯಲ್ಲಿ ನಡೆದಿದೆ.
ಬೆಳ್ಳಂ ಬೆಳಗ್ಗೆ ಪೊಲೀಸರು ಕೊಲೆ ಆರೋಪಿ ಕಾಲಿಗೆ ಫೈರಿಂಗ್ ಮಾಡಿದ್ದಾರೆ. ವಿಜಯಪುರ ನಗರದ ಹೊರವಲಯದ ಅಥಣಿ ರಸ್ತೆಯಲ್ಲಿ ಈ ಒಂದು ಘಟನೆ ನಡೆದಿದೆ. ಆರೋಪಿ ಸುರೇಶ್ ರಾಥೋಡ್ ಕಾಲಿಗೆ ಗುಂಡು ಹಾರಿಸಿ ಅರೆಸ್ಟ್ ಮಾಡಲಾಗಿದೆ. ಜನವರಿ 28ರಂದು ಸತೀಶ್ ರಾಥೋಡ್ ಕೊಲೆ ನಡೆದಿತ್ತು. ಅರಕೇರಿ ಎಲ್ ಟಿ 1 ರ ಬಳಿ ಸತೀಶ್ ರಾಥೋಡ್ ಮೇಲೆ ಭೀಕರವಾಗಿ ಹಲ್ಲೆ ನಡೆಸಿ ಕೊಲೆ ಮಾಡಿದರು.
ಸತೀಶ್ ಕೊಲೆಗೆ ಆರೋಪಿ ಸುರೇಶ್ ಕಂಟ್ರಿ ಪಿಸ್ತೂಲ್ ಪೂರೈಸಿದ್ದ ಎನ್ನಲಾಗಿದೆ. ಸತೀಶ್ ಕೊಲೆ ಬಳಿಕ ಆರೋಪಿ ಸುರೇಶ್ ತಲೆಮರೆಸಿಕೊಂಡಿದ್ದ. ಸುರೇಶ್ ಅಡಗಿದ್ದ ಮಾಹಿತಿ ಪಡೆದು ಪೊಲೀಸರು ಬಂಧನಕ್ಕೆ ತೆರಳಿದ್ದರು. ಈ ವೇಳೆ ಪೊಲೀಸರ ಮೇಲೆ ಹಲ್ಲೆ ನಡೆಸಿದ ಆರೋಪಿ ಸುರೇಶ್ ಪರಾರಿಯಾಗಲು ಯತ್ನಿಸಿದ್ದ. ಈ ವೇಳೆ ಸುರೇಶ್ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ.
ವಿಜಯಪುರ ಗ್ರಾಮೀಣ ಠಾಣೆಯ ಪಿಎಸ್ಐ ವಿನೋದ್ ಫೈರಿಂಗ್ ಮಾಡಿದ್ದಾರೆ ಸುರೇಶ್ ಕಾಲಿಗೆ ಗುಂಡು ಹೊಡೆದು ಆತನನ್ನು ಬಂಧಿಸಿದ್ದಾರೆ. ಸ್ಥಳಕ್ಕೆ ಎಸ್ ಪಿ ಲಕ್ಷ್ಮಣ ನಿಂಬರಗಿ ಹಾಗೂ ಇತರೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು ಬಳಿಕ ಗಾಯಾಳು ಸುರೇಶ್ ರಾಠೋಡ್ನನ್ನು ವಿಜಯಪುರದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.