ವಿಜಯಪುರ : ಮೊಬೈಲ್‌ನಲ್ಲಿ ಅತಿಯಾಗಿ ಚಾಟ್ ಮಾಡುತ್ತಿದ್ದ ಪತ್ನಿಗೆ ಬುದ್ಧಿವಾದ ಹೇಳಿದಕ್ಕೆ ಪತ್ನಿಯೊಬ್ಬಳು ತನ್ನ ಪತಿಯ ಮೇಲೆ ಚಾಕುವಿನಿಂದ ದಾಳಿ ನಡೆಸಿ ಕೊಲೆಗೆ ಯತ್ನಿಸಿರುವ ಘಟನೆ ವಿಜಯಪುರ ನಗರದ ಆಲಕುಂಟೆ ನಗರದಲ್ಲಿ ಇಂದು ನಸುಕಿನ ಜಾವ 3 ಗಂಟೆಗೆ ನಡೆದಿದೆ.
ತೇಜು ರಾಠೋಡ್ ಎಂಬಾಕೆ ತನ್ನ ಪತಿ ಅಜೀತ್ ರಾಠೋಡ್ ಗಾಢ ನಿದ್ರೆಯಲ್ಲಿದ್ದಾಗ ಕತ್ತಿಗೆ ಚಾಕುವಿನಿಂದ ಇರಿದಿದ್ದಾಳೆ. ಅಜೀತ್ ಕಿರುಚಿಕೊಂಡಾಗ ಮನೆಯವರಿಗೆ ವಿಷಯ ಗೊತ್ತಾಗಿದ್ದು, ಕೂಡಲೇ ಅವರನ್ನು ಬಿಎಲ್‌ಡಿಇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಅಜೀತ್ ಅವರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ತೇಜು ಸದಾ ಮೊಬೈಲ್‌ನಲ್ಲಿ ಬೇರೆಯವರೊಂದಿಗೆ ಚಾಟ್ ಮಾಡುತ್ತಿದ್ದುದ್ದಕ್ಕೆ ಅಜೀತ್ ಬುದ್ಧಿವಾದ ಹೇಳಿದ್ದರು. ಇದು ತೇಜುಗೆ ಸಿಟ್ಟು ತಂದಿದ್ದು, ಆಕೆ ಈ ದುಸ್ಸಾಹಸಕ್ಕೆ ಕೈಹಾಕಿದ್ದಾಳೆ ಎಂದು ಆರೋಪಿಸಲಾಗಿದೆ. ಆದರ್ಶನಗರ ಪೊಲೀಸರು ತೇಜು ರಾಠೋಡ್‌ನನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.ಪ್ರಕರಣ ಆದರ್ಶನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.