ಚಿತ್ರದುರ್ಗ : ಪೌತಿ ಖಾತೆ ಮಾಡಿ ಕೊಡಲು ವ್ಯಕ್ತಿ ಒಬ್ಬರ ಬಳಿ 10 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಗ್ರಾಮ ಲೆಕ್ಕಾಧಿಕಾರಿ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ನೆಲಗೇಲತಹಟ್ಟಿ ಗ್ರಾಮದಲ್ಲಿ ನಡೆದಿದೆ.
ಹೌದು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ನೆಲಗೇಲತಹಟ್ಟಿ ಗ್ರಾಮ ಲೆಕ್ಕಾಧಿಕಾರಿ ಹರೀಶ್ ಲೋಕಾ ಬಲೆಗೆ ಬಿದ್ದ ಅಧಿಕಾರಿಯಾಗಿದ್ದಾನೆ. ಕಚೇರಿಯಲ್ಲಿ 10,000 ರೂಪಾಯಿ ಲಂಚ ಸ್ವೀಕರಿಸುವ ವೇಳೆ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದಿದ್ದಾನೆ. ಗ್ರಾಮದ ಚನ್ನಕೇಶವಯ್ಯ ಎಂಬುವವರಿಂದ ಲಂಚ ಸ್ವೀಕರಿಸುವಾಗ ಸಿಕ್ಕಿ ಬಿದಿದ್ದಾನೆ.
ಗ್ರಾಮ ಲೆಕ್ಕಾಧಿಕಾರಿಗೆ ಸಹಕಾರ ನೀಡಿದ್ದ ಖಾಸಗಿ ವ್ಯಕ್ತಿ ಬೋರೇಶ್ ಎನ್ನುವ ವ್ಯಕ್ತಿಯನ್ನು ಸಹ ಇದೀಗ ಬಂಧಿಸಲಾಗಿದೆ. ಲೋಕಾಯುಕ್ತ ಎಸ್ಪಿ ವಾಸುದೇವ್ ರಾವ್ ನೇತೃತ್ವದಲ್ಲಿ ಈ ದಾಳಿ ನಡೆಸಲಾಗಿದ್ದು, ಇಬ್ಬರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.